ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಬೆಳಗಾವಿ 3.0 ತಂಬಾಕು ಮುಕ್ತ ಯುವ ಅಭಿಯಾನದ ಅಡಿಯಲ್ಲಿ ಜನ ಆರೋಗ್ಯ ಸಮಿತಿ ಸಭೆಯನ್ನು ರಾಮದುರ್ಗ ತಾಲೂಕಿನ ನಂದಿಹಾಳ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಯಿತು.
ಸಭೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಡಾ. ಶ್ವೇತಾ ಪಾಟೀಲ್ ಇವರು ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾತನಾಡುತ್ತಾ ಕ್ಯಾನ್ಸರ್ ಪ್ರಕರಣಗಳು ಹಾಗೂ ಸಾವುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಯುವ ಜನತೆ ತಂಬಾಕು ಸೇವನೆಯಿಂದ ದೂರವಿರಬೇಕು ತಂಬಾಕು ಸೇವನೆಯಿಂದ ಕ್ಯಾನ್ಸರ್ ಹೃದಯ ಸಂಬಂಧಿ ಕಾಯಿಲೆ ಸ್ವಾಶಕೋಶದ ಕಾಯಿಲೆ ಲಕ್ವಾ ಇತರೆ ಕಾಯಿಲೆಗಳು ಬರುತ್ತವೆ ಪ್ರತಿ ಸಿಗರೇಟ್ ಬಿಡಿ ಸೇವನೆಯಿಂದ ಏಳು ನಿಮಿಷ ಆಯುಷ್ಯ ಕಡಿಮೆ ಮಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸುತ್ತದೆ ಎಂದು ಸಭೆಯಲ್ಲಿ ಮಾತನಾಡಿದರು.
ಹಾಗೂ ಇನ್ನೋರ್ವ ಕುಮಾರಿ ಕವಿತಾ ರಾಜಣ್ಣವರ್ ಸಮಾಜ ಕಾರ್ಯಕರ್ತರು ಇವರು ಗ್ರಾಮೀಣ ಪ್ರದೇಶಗಳಲ್ಲಿ ತಂಬಾಕು ಸೇವನೆಯಿಂದ ಮಾನವನ ದೇಹದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಜಾಗೃತಿ ಮೂಡಿಸುವುದು ಗ್ರಾಮೀಣ ಪ್ರದೇಶಗಳಲ್ಲಿ ಅತಿ ಅವಶ್ಯಕವಾಗಿದೆ. ವಿಶ್ವದಾದ್ಯಂತ ತಡೆಗಟ್ಟಬಹುದಾದ ಕಾಯಿಲೆ ಮತ್ತು ಮರಣಗಳ ಕಾರಣಗಳಲ್ಲಿ ತಂಬಾಕು ಸೇವನೆ ಪ್ರಮುಖ ಕಾರಣವಾಗಿದೆ ಭಾರತದಲ್ಲಿ ಸುಮಾರು 27 ಕೋಟಿ ಅಧಿಕ ಜನ ತಂಬಾಕು ಮೊಳಕೆದಾರರಿದ್ದು ಪ್ರತಿ ವರ್ಷ 13 ಲಕ್ಷಕ್ಕೂ ಹೆಚ್ಚು ಜನರು ತಂಬಾಕು ಸೇವನೆ ಸಂಬಂಧಿತವಾಗಿ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. 18 ವರ್ಷದೊಳಗಿನ ವ್ಯಕ್ತಿಗಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಅವರಿಂದ ಮಾರಾಟ ಮಾಡಿಸುವುದನ್ನು ತಡೆಗಟ್ಟಲು ಕ್ರಮವಹಿಸುವುದು ಅತಿ ಅವಶ್ಯಕವಾಗಿದೆ ಗ್ರಾಮದ ಎಲ್ಲ ತಂಬಾಕು ಉತ್ಪನ್ನಗಳ ಮಾರಾಟ ಅಂಗಡಿಗಳಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷ ಜಾಹೀರಾತುಗಳ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ ಗ್ರಾಮದ ಸಾರ್ವಜನಿಕ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನಗಳು ಬಳಕೆಯಾಗದಂತೆ ಬಿಡಿ ಸಿಗರೇಟ್ ತುಂಡುಗಳು ಹಾಗೂ ಜಿಗಿಯುವ ತಂಬಾಕಿನ ಚೀಟಿಗಳು ಪಾಕೆಟ್ ಗಳು ಬೀಳದಂತೆ ಕ್ರಮ ವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಭೆಯಲ್ಲಿ ಮಾತನಾಡಿದರು.
ಆಶಾ ಹಿರೇಮಠ್ ಆಪ್ತ ಸಮಾಲೋಚಕರು ಇವರು ಸಭೆಯಲ್ಲಿ ಮಾತನಾಡುತ್ತಾ ತಂಬಾಕು ಸೇವನೆಗೆ ಒಳಗಾಗುತ್ತಿರುವ ವ್ಯಕ್ತಿಗಳಿಗೆ ಬೆಳಗಾವಿ ಜಿಲ್ಲೆಯಲ್ಲಿರುವ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ದೊರೆಯುವ ಸೇವಾ ಸೌಲಭ್ಯದ ಕುರಿತು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಪ್ರಾಥಮಿಕ ಕನ್ನಡ ಶಾಲೆಯ ಮುಖ್ಯೋಪಾಧ್ಯರು ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ಸದಸ್ಯರು, ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಸಭೆಯಲ್ಲಿ ಉಪಸ್ಥಿತರಿದ್ದರು

