ರಾಜ್ಯ ಹಾಗೂ ಕೇಂದ್ರದಲ್ಲಿ ಸರ್ಕಾರಿ ಖಾಲಿ ಹುದ್ದೆಗಳಿ ನೇಮಕಾತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉದೋಗ್ಯ ಆಕಾಂಕ್ಷೆಗಳು ಇದೇ ಡಿಸೆಂಬರ್ 10ರಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಉದ್ಯೋಗ ಆಕಾಂಕ್ಷೆಗಳ ಹೋರಾಟ ಸಮಿತಿಯ ರಾಜ್ಯ ಸಹ ಸಂಚಾಲಕ ಭವಾನಿ ಶಂಕರ್ ಎಸ್ ಹೇಳಿದರು.
ಈ ಕುರಿತು ಧಾರವಾಡದಲ್ಲಿ ಮಾಧ್ಯಮ ಹೇಳಿಕೆ ನೀಡಿದ ಅವರು, ಕಳೆದ ಡಿಸೆಂಬರ್ 1 ರಂದು ಸರ್ಕಾರಗಳ ಖಾಲಿ ಹುದ್ದೆಗಳ ನೇಮಕಾತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಚಲೋ ಹೋರಾಟಕ್ಕೆ ಕರೆ ನೀಡಲಾಗಿತ್ತು. ಆದರೆ ಈ ಹೋರಾಟ ಬರುವ ಉದ್ಯೋಗ ಆಕಾಂಕ್ಷೆಗಳ ಧ್ವನಿಯನ್ನು ಪೊಲೀಸರು ಮದ್ಯ ಪ್ರವೇಶ ಮಾಡುವ ಮೂಲಕ ಹತ್ತಿಕ್ಕಲಾಯಿತ್ತು. ಜತೆಗೆ ಈ ಹೋರಾಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗ ಆಕಾಂಕ್ಷೆಗಳು ಭಾಗಿಯಾಗಿದ್ದರು. ಅವರೆಗೆಲ್ಲ ಸಮಿತಿ ವತಿಯಿಂದ ಧನ್ಯವಾದ ತಿಳಿಸುತ್ತೇವೆ. ಇದರ ಭಾಗವಾಗಿ ಇದೇ ಅಕ್ಟೋಬರ್ 17ರಂದು ಧಾರವಾಡದಲ್ಲಿ ಉದ್ಯೋಗಾಕಾಂಕ್ಷೆಗಳ ರಾಜ್ಯಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟಿಸ್ ಸಂತೋಷ್ ಹೆಗಡೆ, ಹಿರಿಯ ಸಾಮಾಜಿಕ ಹೋರಾಟಗಾರರಾದ ಶ್ರೀ ಎಸ್ ಆರ್ ಹಿರೇಮಠ್ ಅವರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು. ಶೀಘ್ರ ನೇಮಕಾತಿ ಸೇರಿದಂತೆ ಉದ್ಯೋಗಾಕಾಂಕ್ಷಿಗಳ ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಿ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ನಂತರ ಜಸ್ಟಿಸ್ ಸಂತೋಷ್ ಹೆಗಡೆ, ಶ್ರೀ ಎಸ್ ಆರ್ ಹಿರೇಮಠ ನೇತೃತ್ವದ ನಿಯೋಗದಲ್ಲಿ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಅವಕಾಶವನ್ನು ಕೇಳಲಾಗಿತ್ತು. ಸರ್ಕಾರದಿಂದ ಸ್ಪಂದನೆ ಸಿಗದಿದ್ದಾಗ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹೋರಾಟ ಸಮಿತಿಯ ರಾಜ್ಯ ಸಂಚಾಲಕರಾದ ಸಿದ್ದಲಿಂಗ ಬಾಗೇವಾಡಿ ಮನವಿ ಪತ್ರವನ್ನು ಸಲ್ಲಿಸಿ ನಿಗದಿತ ಕಾಲ ಮಿತಿಯೊಳಗೆ ಉದ್ಯೋಗ ಆಕಾಂಕ್ಷಿಗಳ ಬೇಡಿಕೆಗಳಿಗೆ ಸ್ಪಂದಿಸಲು ಆಗ್ರಹಿಸಿದ್ದರು. ಈಗ ಈ ಹೋರಾಟಕ್ಕೆ ಧಾರವಾಡ ಸೇರಿದಂತೆ ರಾಜ್ಯದಾದ್ಯಂತ ಎಲ್ಲಾ ಸ್ತರದ ಜನಗಳ ಬೆಂಬಲ ಸಿಕ್ಕಿರುವುದು ಮಾಧ್ಯಮಗಳ ಮೂಲಕ ಜಗಜ್ಜಾಗಿರವಾಗಿದೆ. ಇಷ್ಟಾದರೂ ಸರ್ಕಾರವು ಯಾವುದೇ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಈ ಹಿನ್ನೆಲೆಯಲ್ಲಿ ಉದ್ಯೋಗ ಅಕಾಂಕ್ಷಿಗಳಿಗೆ ಉನ್ನತ ಹಂತದ ಹೋರಾಟಕ್ಕೆ ಮುನ್ನಡೆಯುವುದಲ್ಲದೆ ಬೇರೆ ದಾರಿಯಿಲ್ಲ. ಆದ್ದರಿಂದ, ಉದ್ಯೋಗ ಒದಗಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿಳಂಬ ನೀತಿಯನ್ನು ಖಂಡಿಸಿ ಡಿಸೆಂಬರ್ 10ರಂದು ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಂಡಿದ್ದೇವೆ. ಈ ಪ್ರತಿಭಟನಾ ಧರಣಿಗೆ ರೈತ ಸಂಘಟನೆಗಳ, ಕಾರ್ಮಿಕ ಸಂಘಟನೆಗಳ, ವಿದ್ಯಾರ್ಥಿ ಯುವಜನ ಮಹಿಳಾ ಸಂಘಟನೆಗಳ, ಹಲವಾರು ಜನಪರ ಸಂಘಟನೆಗಳ ನಾಯಕರುಗಳು ಹಾಗೂ ಸಾಮಾಜಿಕ ಹೋರಾಟಗಾರರು ಬೆಂಬಲ ಸೂಚಿಸಿ ಮಾತನಾಡಲಿದ್ದಾರೆ. ಈ ಬೃಹತ್ ಪ್ರತಿಭಟನಾ ಧರಣಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬೇಕೆಂದು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಮನವಿ ಮಾಡಿದರು.

