ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದ ಪಿಜಿ ಜಿಮ್ಖಾನಾ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಇಂದು ವಿಜೃಂಭಣೆಯಿಂದ ನಡೆಯಿತು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಮೀರಾ ಸುರೇಶ ಪಂಡಿತ ಅವರು, “ವಿದ್ಯಾರ್ಥಿಗಳು ಜೀವನದಲ್ಲಿ ಅನೇಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಯಾವ ರೀತಿಯ ನಿರ್ಧಾರಗಳನ್ನು ಆರಿಸಿಕೊಳ್ಳಬೇಕು ಎಂಬುದರ ಕುರಿತು ಆತ್ಮವಿಶ್ವಾಸ ಮತ್ತು ವಿವೇಕದಿಂದ ವಿಚಾರ ಮಾಡಬೇಕು” ಎಂದು ಹೇಳಿದರು.
ಈ ಸಮಾರಂಭದಲ್ಲಿ ಕುಲಸಚಿವರು ಸಂತೋಷ ಕಾಮಗೌಡ ಅವರು ಮಾತನಾಡಿ ಯಾರಾದರೂ ಒಬ್ಬರು ಸಾಧನೆ ಅಂತ ಮಾಡಿದರೆ ಅದರ ಬಗ್ಗೆ ತಪ್ಪಾಗಿ ಮಾತನಾಡುವವರೆ ಜಾಸ್ತಿ ಇವಾಗ ಮತ್ತು ಈ ನಮ್ಮ ನಡುವೆ ಯಾವಾಗಲೂ 3 ತರಹದ ವ್ಯಕ್ತಿಗಳು ಇರುತ್ತಾರೆ ಎಂದು ಹೇಳಿದರು. ಯಾವಾಗಲೂ ಶ್ರಮ ಇರಬೇಕು ಶ್ರಮ ಇಲ್ಲದೇ ಏನೂ ಮಾಡೋಕೆ ಆಗಲ್ಲ ಎಂದು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಅಭ್ಯಾಸದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮಹತ್ವದ ಬಗ್ಗೆ ಅವರು ಒತ್ತಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಹಲವಾರು ಗಣ್ಯ ವ್ಯಕ್ತಿಗಳು ವಿಶ್ವವಿದ್ಯಾಲಯದ ಕುಲಪತಿಗಳು ಸಿಬ್ಬಂದಿ ವರ್ಗದವರು, ವಿದ್ಯಾರ್ಥಿ ಒಕ್ಕೂಟದ ಸದಸ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.

