ವಿಜಯಪುರ ಜಿಲ್ಲಾ ನ್ಯಾಯವಾದಿಗಳ ಸಂಘ, ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಇಲಾಖೆ, ಶಿವಗಿರಿ ಚಾರಿಟೇಬಲ್ ಟ್ರಸ್ಟ್ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ, ವಕೀಲರ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಹರೀಶ ಎ ಅವರು ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಹಲವು ನ್ಯಾಯವಾದಿಗಳು, ನ್ಯಾಯಾಧೀಶರು ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು… ಈ ವೇಳೆ ಶಿವಗಿರಿ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರು ಹಾಗೂ ಚಿತ್ರ ನಿರ್ಮಾಪಕರಾದ ಬಸಂತಕುಮಾರ ಪಾಟೀಲ, ಶ್ರೀಮತಿ ಆರತಿ ದೇಸಾಯಿ ಮತ್ತಿತರರು ಉಪಸ್ಥಿತರಿದ್ದರು.



