State

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನುವಾದಿಗಳಾಗಿದ್ದಾರೆ; ಸಿಎಂ ಸಿದ್ದರಾಮಯ್ಯ

Share

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನುವಾದಿಗಳಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.


ವಿಧಾನಸೌಧದಲ್ಲಿಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ ಡಾll ಬಿ ಆರ್ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು.ಬಳಿಕ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿಯವರು ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಗಳಾಗಿದ್ದಾರೆ ಎಂದು ಕಿಡಿಕಾರಿದರು.‌

ಬಳಿಕ ಮಾತನಾಡಿದ ಅವರು, ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿ. ಅವರು ದೇಶಕ್ಕೆ ಎಂಥ ಸಂವಿಧಾನದ ಅಗತ್ಯವಿದೆ ಎಂದು ಚಿಂತಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ ದೇಶಕ್ಕೆ ಅಗತ್ಯವಿರುವ ಸಂವಿಧಾನವನ್ನು ಕೊಟ್ಟಿದ್ದಾರೆ ಎಂದು ಹೇಳಿದರು.

Tags:

error: Content is protected !!