ದಾವಣಗೆರೆ ಧಣಿ, ದೇಶದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಯುಗಾಂತ್ಯ ಆಗಿದೆ. ವಯೋಸಹಜ ಅನಾರೋಗ್ಯದಿಂದ ಭಾನುವಾರ ಕೊನೆಯುಸಿರೆಳೆದಿರುವ ಶಿವಶಂಕರಪ್ಪ ಅವರ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ.


ಶಾಮನೂರು ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಬೆಳಗಿನಜಾವ ದಾವಣಗೆರೆಗೆ ತರಲಾಗಿದೆ. ಮನೆಯಲ್ಲಿ ಪೂಜೆ ಪುನಸ್ಕಾರ ನೆರವೇರಿಸಿದ ಬಳಿಕ ಮೆರವಣಿಗೆ ಮೂಲಕ ನಗರದ ಹೈಸ್ಕೂಲ್ ಮೈದಾನದಲ್ಲಿ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಸಂಜೆ ನಾಲ್ಕು ಗಂಟೆ ಸುಮಾರಿಗೆ ಹೈಸ್ಕೂಲ್ ಮೈದಾನದಿಂದ ಕಲ್ಲೇಶ್ವರ ಮಿಲ್ಗೆ ಅಂತಿಮಯಾತ್ರೆ ನಡೆಯಲಿದೆ. ಕಲ್ಲೇಶ್ವರ ಮಿಲ್ನಲ್ಲಿ ಪತ್ನಿ ಪಾರ್ವತಮ್ಮ ಅವರ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನೆರವೇರಲಿದೆ.

ಬೆಳಗ್ಗೆ ಪಾರ್ಥಿವ ಶರೀರವನ್ನು ದಾವಣಗೆರೆಗೆ ತರಲಾಗಿದೆ. ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಅಂತಿಮಯಾತ್ರೆ ನಡೆಯಲಿದ್ದು ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಎಸ್ಪಿ ಉಮಾಪ್ರಶಾಂತ್ ಮಾಹಿತಿ ನೀಡಿದ್ದಾರೆ. ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಸಂಜೆ 4.30 ಗಂಟೆಗೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಹಳೇ ದಾವಣಗೆರೆ ಭಾಗದ ಬಂಬೂಬಜಾರ್ ರಸ್ತೆಯ ಕಲ್ಲೇಶ್ವರ ಮಿಲ್ನಲ್ಲಿ ಶಾಮನೂರು ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದೆ. ಅಲ್ಲಿ ಪತ್ನಿ ಪಾರ್ವತಮ್ಮ ಅವರ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಯಲಿದೆ. ಜೆಸಿಬಿ ಬಳಸಿ ಕಾರ್ಯಕರ್ತರು ಅಭಿಮಾನಿಗಳು ಅಂತ್ಯಕ್ರಿಯೆಗೆ ಸಿದ್ಧತೆ ಕೈಗೊಂಡಿದ್ದಾರೆ.


ಶಾಮನೂರು ನಿಧನರಾದ ಹಿನ್ನೆಲೆಯಲ್ಲಿ, ಅವರ ಗೌರವಾರ್ಥ ಇಂದು ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. 15.12.2025ರಂದು ದಾವಣಗೆರೆ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.


ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಮಾಜಿ ಪಿಎಂ ಎಚ್.ಡಿ.ದೇವೆಗೌಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಎಚ್.ಕೆ. ಪಾಟೀಲ್, ಸಂತೋಷ್ ಲಾಡ್ ಶಾಸಕರಾದ ಎಚ್.ಡಿ. ರೇವಣ್ಣಾ, ಅಶೋಕ ಪಟ್ಟಣ್, ಎಂ.ಎಲ್.ಸಿ ಛಲುವಾದಿ ನಾರಾಯಣಸ್ವಾಮಿ ಇನ್ನುಳಿದವರು ಸಂತಾಪ ಸೂಚಿಸಿದ್ದಾರೆ.


