ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತ ದೇಹ ಪತ್ತೆಯಾಗಿರುವ ಘಟನೆ ಧಾರವಾಡ ಪ್ರಾದೇಶಿಕ ಕೇಂದ್ರೀಯ ಬಸ್ಸ ನಿಲ್ದಾಣದಲ್ಲಿಂದ ನಡೆದಿದೆ.

ವೈ- ಧಾರವಾಡ ಹಳೇ ಬಸ್ಸ ನಿಲ್ದಾಣವೆಂದು ಕರೆಯುವ ಪ್ರಾದೇಶಿಕ ಕೇಂದ್ರೀಯ ಬಸ್ಸ ನಿಲ್ದಾಣದ ಸಂದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ. ಇನ್ನೂ ಮೃತ ದೇಹ ಪತ್ತೆಯಾದ ಹಿನ್ನಲೆಯಲ್ಲಿ ಸ್ಥಳೀಯ ಬಸ್ಸ ನಿಲ್ದಾಣದ ಅಧಿಕಾರಿಗಳು ಶಹರ ಠಾಣೆಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತ ದೇಹವನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದು, ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಪೊಲೀಸರ ಪ್ರಾಥಮಿಕ ತನಿಖೆಯ ಬಳಿಕ ವ್ಯಕ್ತಿಯ ಮೃತ ದೇಹ ಪತ್ತೆಯ ಅಸಲಿ ಸತ್ಯ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುವುದು ಬಯಲಿಗೆ ಬರಬೇಕಿದೆ.
