ನಾವು ಯಾವಾಗಲೂ ಸಿದ್ದರಾಮಯ್ಯ ಪರವಾಗಿ ಇದ್ದೇವೆ. ಡಿಕೆ ಶಿವಕುಮಾರ್ ಏನೇ ಪ್ರಯತ್ನ ಮಾಡಿದರು ಕೂಡ ನನ್ನ ಹಿಂದಿನ ಎಲ್ಲ ಹೇಳಿಕೆಗಳಿಗೆ ಬದ್ಧನಾಗಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಡಿಕೆಶಿ ಭೇಟಿ ಬಳಿಕ ಹೇಳಿಕೆ ನೀಡಿದ್ದಾರೆ.

ಶನಿವಾರದಂದು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಕೆ.ಎನ್ ರಾಜಣ್ಣ ಭೇಟಿ ಮಾಡಿದ್ದರು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್ ಪಾರ್ಟಿ ಅಧ್ಯಕ್ಷರಾಗಿ ಭೇಟಿ ಮಾಡಿದ್ದರು. ಯಾರಿಗೆ ಬೇಕಾದರೂ ಭೇಟಿ ಮಾಡಬಹುದು, ಯಾರನ್ನಾದರೂ ಕರೆದು ಮಾತನಾಡಬಹುದು. ಪಕ್ಷದ ಹಿತದೃಷ್ಟಿಯಿಂದ ಏನೆಲ್ಲಾ ಮಾಡಬೇಕು ಅನಿಸುತ್ತೆ ಅವರು ಮಾಡುತ್ತಾರೆ. ಇದರಲ್ಲಿ ಯಾವುದೇ ಪ್ರಮುಖ ವಿಚಾರ ಇಲ್ಲ. ನಾವು ಯಾವಾಗಲೂ ಸಿದ್ದರಾಮಯ್ಯ ಪರವಾಗಿ ಇದ್ದೇವೆ. ಡಿಕೆ ಶಿವಕುಮಾರ್ ಏನೇ ಪ್ರಯತ್ನ ಮಾಡಿದರೂ ಕೂಡ ನನ್ನ ಹಿಂದಿನ ಎಲ್ಲ ಹೇಳಿಕೆಗಳಿಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.
