Vijaypura

ಶಾಸಕ ಯತ್ನಾಳಗೆ ಜೆಸಿಬಿ ಮೂಲಕ ಹೂ ಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತ

Share

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮನವರ 201ನೇ ವಿಜಯೋತ್ಸವ ಹಾಗೂ 247ನೇ ಜಯಂತ್ಯುತ್ಸವ, ಹಿಂದೂಗಳ ಸಂಸ್ಕೃತಿ ಸಮಾವೇಶ, ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಪಂಚಮಸಾಲಿ ಮೀಸಲಾತಿ ಪ್ರತಿಜ್ಞಾ ವಿಧಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಇದಕ್ಕೂ ಮೊದಲು ಜೆಸಿಬಿ ಮೂಲಕ ಹೂ ಮಳೆ ಸುರಿಸಿ ಅತ್ಯಂತ ಅದ್ದೂರಿಯಾಗಿ ಪಟ್ಟಣಕ್ಕೆ ಅಭಿಮಾನಿಗಳು ಸ್ವಾಗತಿಸಿದರು. ಇದೇ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರುಗಳಾದ ಪರಮಪೂಜ್ಯ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು, ಹಂಪಿ ಸಾವಿರದೇವರ ಮಠದ ಶ್ರೀ ಷ.ಬ್ರ.ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮೀಜಿಗಳು, ಒಕ್ಕಲಿಗರ ಹಿರೇಮಠದ ಶ್ರೀ ಷ.ಬ್ರ. ಮರುಳ ಮಹಾಂತ ಶಿವಾಚಾರ್ಯ ಸ್ವಾಮೀಜಿಗಳ, ಶಾಸಕರಾದ ಅಶೋಕ ಮನಗೂಳಿ ಹಾಗೂ ರಾಜುಗೌಡ ಪಾಟೀಲ ಕುದರಿ ಸಾಲವಾಡಗಿ ರವರು ಸೇರಿದಂತೆ ಮುಖಂಡರು, ಹಿತೈಷಿಗಳು, ಹಿಂದೂ ಬಾಂಧವರು, ದೇಶಭಕ್ತರು, ಅಭಿಮಾನಿಗಳು, ಕಾರ್ಯಕರ್ತರು, ಸಮಾಜ ಬಾಂಧವರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Tags:

error: Content is protected !!