ವಿಜಯಪುರ ಜಿಲ್ಲೆಯಲ್ಲಿ ಕಳ್ಳರ ಉಪಟಳ ಹೆಚ್ಚಾಗಿದ್ದು, ತಡರಾತ್ರಿ ಮನೆ, ಅಂಗಡಿ ಮುಂಗಟ್ಟುಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಚಡಚಣ, ಗೊಳಸಂಗಿ, ಬಸವನಬಾಗೇವಾಡಿ ಹಾಗೂ ವಿಜಯಪುರ ನಗರದಲ್ಲಿ ಕಳ್ಳತನ ಪ್ರಕರಣಗಳು ವರದಿಯಾಗಿವೆ. ಮುಖಕ್ಕೆ ಮಾಸ್ಕಸ್, ಕಣ್ಣಿಗೆ ಗಾಗಲ್, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಕಳ್ಳರು ಕೃತ್ಯ ಎಸಗುತ್ತಿದ್ದಾರೆ. ಜಿಲ್ಲೆಯ ವಿವಿಧೆಡೆ ನಡೆದ ಕಳ್ಳತನಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಕಳ್ಳರ ಹಾವಳಿ ತಡೆಯಲು ಪೊಲೀಸರು ರಾತ್ರಿ ಗಸ್ತು ಹೆಚ್ಚಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

