hubbali

ಹುಬ್ಬಳ್ಳಿ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣ…. ಧಾರವಾಡದಲ್ಲಿ ಹತ್ಯೆ ಖಂಡಿಸಿ AIMSS ಸಂಘಟನೆಯಿಂದ ಡಿಸಿಗೆ ಮನವಿ.

Share

ಕಳೆದ ಭಾನುವಾರ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಏಳು ತಿಂಗಳ ಗರ್ಭಿಣಿ ಮಹಿಳೆಯ ಮರ್ಯಾದೆ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಲು ಆಗ್ರಹಿಸಿ, ಧಾರವಾಡದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ‌

ಧಾರವಾಡ ಜಿಲ್ಲಾಧಿಕಾರಿ ಮುಂಭಾಗದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಮುಖಂಡೆ ಮಧುಲತಾ ಗೌಡರ್ ನೇತೃತ್ವದಲ್ಲಿ ಸಂಘಟನೆ ಪದಾಧಿಕಾರಿಗಳು ಮರ್ಯಾದೆ ಹತ್ಯೆ ಖಂಡಿಸಿ. ಮನವಿ ‌ಸಲ್ಲಿಸುವ ಮುನ್ನ ಘಟನೆ ಕುರಿತು ಮಾತನಾಡಿದ ಎಐಎಮ್ ಎಸ್ ಎಸ್ ಸಂಘಟನೆಯ ಮುಖಂಡೆ ಮಧುಲತಾ ಅವರು, ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಮಾನ್ಯ ಎಂಬ ಯುವತಿ ಅನ್ಯ ಜಾತಿಯ ಹುಡುಗನ ಜೊತೆ ಮದುವೆಯಾಗಿದ್ದಾಳು. ಇದರಿಂದ ಯುವತಿಯ ಪಾಲಕರು ಕೋಪಗೊಂಡ ಏಳು ತಿಂಗಳ ಗರ್ಭಿಣಿ ಮಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆ ಮಾಡಿದ್ದು ಮಾನವ ಕುಲವೆ ತಲೆ ತಗ್ಗಿಸುವಂತಾಗಿದೆ. ಜತೆಗೆ ಹುಡುಗನ ಕುಟುಂಬದವರ ಮೇಲೂ ಹಲ್ಲೇ ನಡೆಸಿರುವ ಪ್ರಕರಣ ನಡೆದಿದೆ. ಇದೊಂದು ಮರ್ಯಾದೆಗೇಡು ಹತ್ಯೆ ಪ್ರಕರಣವಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು. ಅಲ್ಲದೆ ಕರ್ನಾಟಕದಲ್ಲಿ ಇಂತಹ ನೂರಾರು ಪ್ರಕರಣಗಳು ನಡೆದಿವೆ. ಗದಗದಲ್ಲಿ 2019 ರಲ್ಲಿ ಗಂಗಮ್ಮ ಮತ್ತು ರಮೇಶ್ ಎನ್ನುವವರು ಅಂತರ್ಜಾತಿ ವಿವಾಹವಾದಾಗ ದೀಪಾವಳಿ ಹಬ್ಬದ ನೆಪದಲ್ಲಿ ಕರೆಸಿಕೊಂಡು ಗಂಗಮ್ಮ ಳ ಸಂಭಂದಿಕರು ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಸಾಯಿಸಿದರು. ಮಂಡ್ಯ, ಕೋಲಾರ, ವಿಜಯಪುರ, ಹಾಸನ ದಲ್ಲಿ ಸಾಕಷ್ಟು ಮರ್ಯಾದ ಹತ್ಯೆ ಘಟನೆಗಳು ಜರುಗಿವೆ. ಇವು ಕೇವಲ ವರದಿ ಯಾಗಿರುವ ಪ್ರಕರಣಗಳು, ವರದಿಯಾಗದ ಪ್ರಕರಣಗಳು ಅದೆಷ್ಟು ಇವೆ ಎಂದು ಆತಂಕ ವ್ಯಕ್ತಪಡಿಸಿ ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಗುರಿಯಾಗಿಸಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರು ಅಪರಾಧಿಗಳು ಇದ್ದಾರೆ ಅವರಿಗೆ ಕಠೀಣವಾದ ಶಿಕ್ಷೆಯನ್ನು ಕೊಡಬೇಕು ಸರ್ಕಾರ ಹೆಣ್ಣುಮಕ್ಕಳಿಗೆ ತಮ್ಮ ಮದುವೆಯ ವಿಚಾರದಲ್ಲೂ ಸ್ವಾತಂತ್ರ್ಯ ಇಲ್ಲ ಎಂದರೆ ಇದು ಸ್ವಾತಂತ್ರ್ಯ ಭಾರತನಾ? ಆದ್ದರಿಂದ ಸರ್ಕಾರ ಇದರ ಬಗ್ಗೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳಬೇಕು.

Tags:

error: Content is protected !!