ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷ ಭಾಷಣ ಮಸೂದೆ ಕಾಯ್ದೆ ಜಾರಿ ಮಾಡಿರುವುದನ್ನು ವಿರೋಧಿಸಿ, ಧಾರವಾಡದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ.

ವೈ- ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಈ ಹಿಂದೆ ದೇಶದಲ್ಲಿ ಇಂದಿರಾ ಗಾಂಧಿ ಅವರು ತುರ್ತು ಪರಸ್ಥಿತಿ ಹೇರಿ ಜನ ಮಾತನಾಡದಂತೆ ಮಾಡಿದ್ದರು. ಈಗ ರಾಜ್ಯ ಕಾಂಗ್ರೆಸ್ ಸರ್ಕಾರ ತಾನು ಮಾಡಿರುವ ಅವ್ಯವಹಾರಗಳನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ದ್ವೇಷ ಭಾಷಣ ಮಸೂದೆ ಕಾಯ್ದೆ ಜಾರಿಗೊಳಿಸಿದೆ. ರಾಜ್ಯದಲ್ಲಿ ಈ ಸರ್ಕಾರ ಜನರ ವಾಕ್ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದೆ. ಕೂಡಲೇ ರಾಜ್ಯ ಸರ್ಕಾರ ತಾನು ಜಾರಿಗೊಳಿಸಿರುವ ದ್ವೇಷ ಭಾಷಣ ಮಸೂದೆ ಕಾಯ್ದೆಯನ್ನು ಹಿಂಪಡೆಯಬೇಕು ಇಲ್ಲದೇ ಹೋದರೆ ಬರುವ ದಿನಗಳಲ್ಲಿ ಬಿಜೆಪಿ ರಾಜ್ಯದಾದ್ಯಂತ ದೊಡ್ಡಮಟ್ಟದ ಹೋರಾಟಕ್ಕೆ ಕರೆ ನೀಡುತ್ತದೆ ಎಂದು ಬಿಜೆಪಿ ಕಾರ್ಯಕರ್ತರು ಎಚ್ಚರಿಕೆ ನೀಡಿದರು.
