ವಿಜಯಪುರ ಜಿಲ್ಲೆಯ ತಿಕೋಟ ತಾಲೂಕುಯ ರತ್ನಾಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಬ್ಬು ತುಂಬಿದ್ದ ಟ್ರಾಕ್ಟರ್ ಟ್ರೈಲರ್‌ಗೆ ಮೊದಲು ಬೆಂಕಿ ಹೊತ್ತಿಕೊಂಡು, ನಂತರ ಪಕ್ಕದ ಹೊಲದಲ್ಲಿದ್ದ ಸುಮಾರು 5 ಏಕರೆ ಕಬ್ಬಿನ ಬೆಳೆಗೂ ಬೆಂಕಿ ವ್ಯಾಪಿಸಿದೆ. ಈ ಕಬ್ಬು ರತ್ನಾಪುರ ಗ್ರಾಮದ ರೈತ ಭೀಮು ಕೆಂಬಾವಿ ಅವರಿಗೆ ಸೇರಿದ್ದಾಗಿದೆ. ಬೆಂಕಿಯ ತೀವ್ರತೆಯಿಂದ ಟ್ರೈಲರ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಕಬ್ಬಿನ ಬೆಳೆಗೂ ಅಪಾರ ಹಾನಿಯಾಗಿದೆ. ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಧಾವಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ. ಪ್ರಕರಣ ತಿಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

