Chikkodi

ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್, 17ಕ್ಕೂ ಹೆಚ್ಚು ಜನರ ಸಜೀವ ದಹನ

Share

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಸ್ವೀಪರ್ ಕೋಚ್ ಬಸ್‌ನಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್‌ ಹೊತ್ತಿ ಉರಿದಿದೆ. ಈ ದುರ್ಘಟನೆಯಲ್ಲಿ ಒಟ್ಟು 17ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಉಳಿದ ಪ್ರಯಾಣಿಕರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Tags:

error: Content is protected !!