DEATH

ಮಲಪ್ರಭಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಹೊಂಗಲ ತಾಲ್ಲೂಕಿನ ನಯಾನಗರ ಗ್ರಾಮದಲ್ಲಿ ನಡೆದಿದೆ.

Share

ಮಲಪ್ರಭಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಹೊಂಗಲ ತಾಲ್ಲೂಕಿನ ನಯಾನಗರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಬೈಲಹೊಂಗಲ ಪಟ್ಟಣದ ದೇಶನೂರ ಚಾಳ ನಿವಾಸಿ ಸರತಾಜ ಜೈನುಲ್ಲಾ ತೆರಗಿ (35) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ‘ಕೆಲಸಕ್ಕೆ ಹೋಗಿ ಬರುತ್ತೇನೆ’ ಎಂದು ಮನೆಯಿಂದ ಹೊರಬಂದಿದ್ದ ಸರತಾಜ ಅವರು ಮರಳಿ ಬಂದಿರಲಿಲ್ಲ. ನಯಾನಗರದ ಬಳಿಯ ನದಿ ತೀರದ ರಸ್ತೆ ಪಕ್ಕದಲ್ಲಿ ಬೈಕ್ ನಿಂತಿರುವುದನ್ನು ಗಮನಿಸಿದ ಪೊಲೀಸರಿಗೆ ಅನುಮಾನ ವ್ಯಕ್ತವಾಗಿತ್ತು.
ಕೂಡಲೇ ಎಚ್ಚೆತ್ತ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯ ನಂತರ ಸರತಾಜ ಅವರ ಮೃತದೇಹ ಪತ್ತೆಯಾಗಿದೆ. ಈ ಘಟನೆಯು ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:

error: Content is protected !!