ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಡಿಸೆಂಬರ್ 29ರಂದು ಬಸವಾದಿ ಶರಣರ ಹಿಂದೂ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರದಲ್ಲಿ ಅಭಿನವ ಶ್ರೀಗಳು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಈ ಸಮಾವೇಶದಲ್ಲಿ ನಾಡಿನ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಯುವಕರು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು. ಯುವಕರಲ್ಲಿ ಹಿಂದೂ ಧರ್ಮದ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

