BELAGAVI

ಈಜಲು ಹೋಗಿ ಕಾಲುವೆಯಲ್ಲಿ ಮುಳುಗಿ ಬಾಲಕರಿಬ್ಬರ ದುರ್ಮರಣ!!!!

Share

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದಲ್ಲಿ ಇಂದು ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದ್ದು, ಈಜಲು ಹೋದ ಇಬ್ಬರು ಬಾಲಕರು ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಚುಂಚನೂರ ಗ್ರಾಮದ ನಿವಾಸಿಗಳಾದ ಬಸವರಾಜ್ ಸೋಮನವರ್ (10 ವರ್ಷ) ಹಾಗೂ ಹನುಮಂತ ಹಗೆದ (10 ವರ್ಷ) ಮೃತಪಟ್ಟ ದುರ್ದೈವಿಗಳು. ಇಬ್ಬರು ಬಾಲಕರು ಮಧ್ಯಾಹ್ನದ ಸಮಯದಲ್ಲಿ ಗ್ರಾಮದ ಸಮೀಪವಿರುವ ಕಾಲುವೆಗೆ ಈಜಲು ತೆರಳಿದ್ದರು. ಈ ಸಂದರ್ಭದಲ್ಲಿ ಕಾಲುವೆಯಲ್ಲಿ ನೀರಿನ ರಭಸ ಹೆಚ್ಚಾಗಿದ್ದರಿಂದ, ನಿಯಂತ್ರಣ ಸಿಗದೆ ಇಬ್ಬರೂ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.ಬಾಲಕರು ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಕೈಗೊಂಡರು. ತೀವ್ರ ಹುಡುಕಾಟದ ನಂತರ ಇಬ್ಬರು ಬಾಲಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತ ಬಾಲಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.ಘಟನಾ ಸ್ಥಳಕ್ಕೆ ಕಟಕೋಳ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Tags:

error: Content is protected !!