BELAGAVI

ಕಲಾ ಪ್ರತಿಭೋತ್ಸವಕ್ಕೆ ಚಾಲನೆ

Share

ಬೆಳಗಾವಿ ಜಿಲ್ಲೆಯ ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಜಾನಪದ ಗೀತೆ, ಸುಗಮ ಸಂಗೀತ, ಹಿಂದೂಸ್ತಾನಿ ವಾದ್ಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಚಿತ್ರಕಲೆ, ಅಶುಭಾಷನ, ಶಾಸ್ತ್ರೀಯ ನೃತ್ಯ, ನಾಟಕ ಕಲಾ ಪ್ರಕಾರಗಳಲ್ಲಿ ಎರಡು ದಿನಗಳ ಕಾಲ ಸ್ಪರ್ಧಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವತಿಯಿಂದ ಮಂಗಳವಾರ ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಜರುಗಿದ ವಲಯ ಮಟ್ಟದ ಕಲಾ ಪ್ರತಿಭೋತ್ಸವ 2025-26 ರ ಕಾರ್ಯಕ್ರಮಕ್ಕೆ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಅದ್ಯಕ್ಷರಾದ ಯಲ್ಲಪ್ಪ ಹಿಮ್ಮಡಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವಲಯದ ಜಂಟಿ ನಿರ್ದೇಶಕರಾದ ಕೆ. ಎಚ್ ಚೆನ್ನೂರ್ . ಹಾಗೂ ವಿವಿದ ಜಿಲ್ಲೆಯಿಂದ ಬಂದಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕರು ಹಾಗು ಗಣ್ಯರು ಉಪಸ್ಥಿತರಿದ್ದರು. ಮತ್ತು ಕನ್ನಡ ಮತ್ತು‌ ಸಂಸ್ಕೃತಿ ಇಲಾಖೆ ಉಪನಿರ್ದೆಶಕಿ ವಿದ್ಯಾವತಿ ಭಜಂತ್ರಿ ಸ್ವಾಗತಿಸಿದರು.

Tags:

error: Content is protected !!