ಇತ್ತೀಚೆಗೆ ಲಿಂಗೈಕ್ಯರಾದ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮವು ದಾವಣಗೆರೆಯ ಆನೆಕೊಂಡದ ಕಲ್ಲೇಶ್ವರ ರೈಸ್‌ಮಿಲ್ ಸಮೀಪದಲ್ಲಿ ಶುಕ್ರವಾರದಂದು ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಮನೂರು ಶಿವಶಂಕರಪ್ಪನವರ ಜೀವನಗಾಥೆಯನ್ನೊಳಗೊಂಡ ‘ಅಮೃತ ಪುರುಷ’ ಸಾಕ್ಷ್ಯಚಿತ್ರವನ್ನು ಬಿಡುಗಡೆಗೊಳಿಸಿ, ಪುಷ್ಪ ನಮನ ಸಲ್ಲಿಸಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ತಮ್ಮ ಗೌರವ ಅರ್ಪಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಶಾಮನೂರು ಶಿವಶಂಕರಪ್ಪ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ವಿಶೇಷವೆಂದರೆ, ಈ ಪುತ್ಥಳಿಯನ್ನು ಅಯೋಧ್ಯೆಯ ಶ್ರೀರಾಮ ಮೂರ್ತಿಯ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಶಾಮನೂರು ಅವರ ಜೀವನ ಕುರಿತ ಕಿರುಹೊತ್ತಿಗೆಯನ್ನು ಲೋಕಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿವಿಧ ಮಠಗಳ ಮಠಾಧೀಶರು ಆಶೀರ್ವಚನ ನೀಡಿದರು. ಶಾಮನೂರು ಶಿವಶಂಕರಪ್ಪನವರ ಕುಟುಂಬಸ್ಥರು ವೇದಿಕೆಯಲ್ಲಿದ್ದರು ಹಾಗೂ ಅವರ ಮೊಮ್ಮಕ್ಕಳು ಅಜ್ಜನೊಂದಿಗಿನ ತಮ್ಮ ಒಡನಾಟ ಮತ್ತು ಸಾಂಗತ್ಯದ ನೆನಪುಗಳನ್ನು ಹಂಚಿಕೊಂಡರು.
ಶಾಮನೂರು ಶಿವಶಂಕರಪ್ಪ ಪುತ್ರ ಹಾಗೂ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಂದೆಯವರ ಕಾರ್ಯವನ್ನು ನೆನೆದರು.

ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ರಾಜಕೀಯ ನಾಯಕರು ಹಾಗೂ ಗಣ್ಯರು ಪಾಲ್ಗೊಂಡಿದ್ದರು.