Chikkodi

ಹಿರೇಕೊಡಿಯಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ

Share

ಹಿರೇಕೊಡಿ ಗ್ರಾಮದ ಟಾಂಗ್ಯಾನಕೋಡಿ–ಚಿಕ್ಕೋಡಿ ಮುಖ್ಯ ರಸ್ತೆಯಿಂದ ಕಮ್ಮಾರ, ಸನದಿ, ಮಾಳಿ, ದೇವಡಕರ, ಕಾಗಲೆ, ಕರಗಾಂವೆ ಹಾಗೂ ಬಂಡಗರ ತೋಟದವರೆಗೆ ಸಂಪರ್ಕ ಕಲ್ಪಿಸುವ 50 ಲಕ್ಷ ರೂ. ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ಇಂದು ಗ್ರಾಮಸ್ಥರು ಹಾಗೂ ಗ್ರಾಮ ಮುಖಂಡರು ಅಧಿಕೃತವಾಗಿ ಚಾಲನೆ ನೀಡಿದರು.

ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕರಾದ ಗಣೇಶ ಹುಕ್ಕೇರಿ ಅವರ ಸತತ ಪ್ರಯತ್ನದಿಂದ ಈ ರಸ್ತೆ ಸುಧಾರಣೆ ಕಾಮಗಾರಿಗೆ 50 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಇಂದು ಕಾಮಗಾರಿಗೆ ಚಾಲನೆ ನೀಡಲಾಯಿತು.

ಈ ರಸ್ತೆ ಸುಧಾರಣೆಯಿಂದ ಸುತ್ತಮುತ್ತಲ ತೋಟ ಪ್ರದೇಶಗಳ ಜನತೆಗೆ ಸುಗಮ ಸಂಚಾರ ವ್ಯವಸ್ಥೆ ಲಭಿಸಲಿದ್ದು, ರೈತರು ಮತ್ತು ಸಾರ್ವಜನಿಕರಿಗೆ ದಿನನಿತ್ಯದ ಓಡಾಟ ಹಾಗೂ ಕೃಷಿ ಉತ್ಪನ್ನಗಳ ಸಾಗಣೆಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಕಾಮಗಾರಿ ಪೂರ್ಣಗೊಂಡ ಬಳಿಕ ಗ್ರಾಮೀಣ ಸಂಪರ್ಕ ವ್ಯವಸ್ಥೆ ಇನ್ನಷ್ಟು ಬಲಪಡಿಸುವ ನಿರೀಕ್ಷೆಯಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸುರೇಶ ಚೌಗಲಾ ಅವರು, “ಗ್ರಾಮಸ್ಥರ ಬಹುದಿನಗಳ ಬೇಡಿಕೆಯಂತೆ ನಮ್ಮ ನಾಯಕರಾದ ಪ್ರಕಾಶ ಹುಕ್ಕೇರಿ ಹಾಗೂ ಗಣೇಶ ಹುಕ್ಕೇರಿ ಅವರ ಸತತ ಪ್ರಯತ್ನದಿಂದ ಇಂದು 50 ಲಕ್ಷ ರೂ. ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದು ಹಿರೇಕೊಡಿ ಗ್ರಾಮದ ಅಭಿವೃದ್ಧಿಯತ್ತ ನಡೆದ ಮಹತ್ವದ ಹೆಜ್ಜೆಯಾಗಿದೆ” ಎಂದು ಹೇಳಿದರು.

ಇದಲ್ಲದೆ, 25 ಕೋಟಿ ರೂ. ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು, ಗ್ರಾಮದಲ್ಲಿ ಶಿಕ್ಷಣ, ರಸ್ತೆ, ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನವನ್ನು ಮಂಜೂರು ಮಾಡಿ ಜನತೆಗೆ ಅನುಕೂಲ ಕಲ್ಪಿಸಿರುವುದಕ್ಕಾಗಿ ಗ್ರಾಮಸ್ಥರ ಪರವಾಗಿ ಇಬ್ಬರೂ ನಾಯಕರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಅನೀಲ ಮಾನೆ, ಸುರೇಶ ಚೌಗಲಾ, ದಾದಾ ಪಟೇಲ, ಭರತ ದೇವಡಕರ, ರಾಮದಾಸ ಬಂಡಗರ, ಮಲ್ಲಿಕಾರ್ಜುನ ಚೌಗಲಾ, ಶ್ರೀಶೈಲ ಮಾಳಿ, ಬಾಳು ನಿಂಗ್ಯಾಗೋಳ, ಲಕ್ಷ್ಮಣ ನಿಂಗ್ಯಾಗೋಳ, ಸುನೀಲ ಭೋಸಲೆ, ಡಾ. ಮುನ್ನಾ ಪಟೇಲ, ಗುತ್ತಿಗೆದಾರ ಸಿ.ಸಿ. ಪಾಟೀಲ ಸೇರಿದಂತೆ ಅನೇಕ ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಅಭಿವೃದ್ಧಿ ಕಾರ್ಯಕ್ಕೆ ಬೆಂಬಲ ವ್ಯಕ್ತಪಡಿಸಿದರು.

Tags:

error: Content is protected !!