ಬೆಳಗಾವಿ ನಗರದ ಮರಾಠಾ ಮಂಡಳ ಪಾಲಿಟೆಕ್ನಿಕ್’ನಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ “ಏಕತ್ವಂ” ಹೆಸರಿನ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮದಿಂದ ಆಯೋಜಿಸಲಾಗಿತ್ತು.


ಮರಾಠಾ ಮಂಡಳ ಸಂಸ್ಥೆಗಳ ಸಮೂಹದ ಅಧ್ಯಕ್ಷರಾದ ಡಾಕ್ಟರ್ ರಾಜಶ್ರೀ ನಾಗರಾಜು ಅವರ ಘನ ಉಪಸ್ಥಿತಿಯಲ್ಲಿ ನಡೆದ ಈ ಸಮಾವೇಶದಲ್ಲಿ ನೂರಕ್ಕೂ ಹೆಚ್ಚು ಮಾಜಿ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ಇದೇ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಂಚಲಾಯಿತು ಹಾಗೂ ಹಳೆಯ ವಿದ್ಯಾರ್ಥಿ ವಿಶ್ವನಾಥ ಲೆಕ್ಕದ ಅವರು ಕಾಲೇಜಿನ ಅಭಿವೃದ್ಧಿಗಾಗಿ 1 ಲಕ್ಷ ರೂಪಾಯಿ ದೇಣಿಗೆ ನೀಡಿದರು. ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕಾಲೇಜಿಗೆ ಅತ್ಯಾಧುನಿಕ ಧ್ವನಿವರ್ಧಕ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ನೃತ್ಯ ಮತ್ತು ಗಾಯನ ಪ್ರದರ್ಶನಗಳು ಎಲ್ಲರ ಮನಸೂರೆಗೊಂಡವು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಆರ್. ಎಸ್. ಸೂರ್ಯವಂಶಿ, ಉಪಪ್ರಾಂಶುಪಾಲರಾದ ಆಶಾ ತೋರ್ವಿ ಮತ್ತು ಸಂಘದ ಪದಾಧಿಕಾರಿಗಳಾದ ಚೇತನ್ ಬೈಲೂರು, ಸಚಿನ್ ವಾಂಗೀಕರ್, ಶೋಧನ್ ಚೌಗುಲೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.


