ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆಗಟ್ಟಲು ಕಟ್ಟು ನಿಟ್ಟಿನ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.


ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪಂಗಡದ ದೌರ್ಜನ್ಯ ತಡೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಬಿಮ್ಸ್ ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡವರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅಂಥ ಘಟನೆಗಳು ಮತ್ತೆ ಮರುಕಳಸದಂತೆ ಎಚ್ಚರಿಕೆ ವಹಿಸಬೇಕು ಎಂದರು.
ದಲಿತ ಮುಖಂಡ ವಿಜಯ ತಳವಾರ ಮಾತನಾಡಿ, ನಗರದ ಆರ್ ಪಿ ಡಿ ವೃತ್ತಕ್ಕೆ ವೀರ ಮದಕರಿ ನಾಯಕರ ಪುತ್ಥಳಿ ಹಾಗೂ ನಾಮಕರಣ ಮಾಡುವಂತೆ ಸಭೆಯ ಗಮನಕ್ಕೆ ತಂದರು.
ಡಿಎಫ್ಓ ಕ್ರಾಂತಿ ಮಾತನಾಡಿ, ಅರಣ್ಯ ಇಲಾಖೆಯ ಬಡ್ತಿಯಲ್ಲಿ ಸಹಸಮಿತಿ ಸಭೆಯಲ್ಲಿ ನಿರ್ದೇಶನದ ಮೆರೆಗೆ ಅರಣ್ಯ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಮನ್ವಯತೆ ಸಭೆ ನಡೆದಿದೆ. ಶೀಘ್ರದಲ್ಲೇ ಎರಡನೇ ಸಭೆ ಕರೆದು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಜಿಪಂ ಸಿಇಓ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಸರಗಿ, ದಲಿತ ಸಂಘಟನೆಯ ಮುಖಂಡ ಮಲ್ಲೇಶ್ ಚೌಗುಲೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
