ಹುಬ್ಬಳ್ಳಿಯಲ್ಲಿ ದಲಿತ ಯುವಕನೊಂದಿಗೆ ಮದುವೆಯಾದ ಕಾರಣಕ್ಕಾಗಿ ಗರ್ಭಿಣಿ ಮಹಿಳೆ ಮಾನ್ಯಳನ್ನು ಕೊಲೆ ಮಾಡಿದ ಪಾಪಿ ತಂದೆ ಸೇರಿದಂತೆ ಉಳಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬೆಳಗಾವಿಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂದೆ ಪ್ರತಿಭಟನೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಂಘಟನಾಕಾರರು ಗರ್ಭಿಣಿ ಮಾನ್ಯಳನ್ನು ಕೊಲೆ ಮಾಡಿದ ಆರೋಪಿಗಳ ಮೇಲೆ ಕೊಲೆ ಪ್ರಕರಣದ ಜೊತೆಗೆ, ಎಸ್.ಸಿ, ಎಸ್.ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕಠಿಣ ಸೆಕ್ಷನ್’ಗಳನ್ನು ದಾಖಲಿಸಿ, ಯಾವುದೇ ಕಾರಣಕ್ಕೂ ಜಾಮೀನು ಸಿಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸಂತ್ರಸ್ತ ಕುಟುಂಬದ ಉಳಿದ ಸದಸ್ಯರಿಗೆ ಸರ್ಕಾರವು ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕು ಹಾಗೂ ಅವರಿಗೆ ಗರಿಷ್ಠ ಮಟ್ಟದ ಆರ್ಥಿಕ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡಬೇಕು ಎಂದು ಹೇಳಿದರು
ಶ್ರೀಕಾಂತ್ ಮಾದರ್ ಮಾತನಾಡಿ ಜಾತಿ ವ್ಯವಸ್ಥೆಯ ಕ್ರೂರ ಮುಖವನ್ನು ಅನಾವರಣಗೊಳಿಸಿರುವ ಈ ಘಟನೆಯಲ್ಲಿ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು ಸಂತ್ರಸ್ತರಿಗೆ ನ್ಯಾಯ ಸಿಗದಿದ್ದಲ್ಲಿ ಹಾಗೂ ಸರ್ಕಾರವು ಭವಿಷ್ಯದ ರಕ್ಷಣೆಗಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಶ್ರೀಕಾಂತ್ ಮಾದರ್, ಮಿಲಿಂದ್ ಐಹೊಳೆ, ಬಸವರಾಜ ಕಟ್ಟಿಮನಿ, ಬಾಳವ್ವ ಕಾಂಬಳೆ, ಸುನಿತಾ ಮೋದಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
