ಬೆಳಗಾವಿಯ ರುಕ್ಮಿಣಿ ನಗರದ ನವದುರ್ಗಾ ಅಯ್ಯಪ್ಪ ದೇವಸ್ಥಾನದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಗೋರಕ್ಷಕ ಹಾಗೂ ಸಮಾಜ ಸೇವಕ ನಿಲೇಶ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ದೇವಸ್ಥಾನದ ಅಧ್ಯಕ್ಷರಾದ ಆನಂದ್ ಶೆಟ್ಟಿ ಹಾಗೂ ಸುಧಾಕರ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಸಮಾರಂಭದಲ್ಲಿ, ದೇವಸ್ಥಾನದ ಅರ್ಚಕರಾದ ಸುರೇಂದರ್ ಗುರುಸ್ವಾಮಿ ಮತ್ತು ವಿವಿಧ ಸಮಾಜ ಸೇವಕರು ಉಪಸ್ಥಿತರಿದ್ದರು. ಗೋರಕ್ಷಣಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ನಿಲೇಶ್ ಅವರನ್ನು ಪೂಜಾ ಕಾರ್ಯಕ್ರಮಕ್ಕೆ ಆಹ್ವಾನಿಸಿ, ಅವರ ನಿಿಸ್ವಾರ್ಥ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಲಾಯಿತು.
ವಿಶೇಷವಾಗಿ ಕೊರೋನಾ ಸಂಕಷ್ಟದ ಸಮಯದಲ್ಲಿ ನಿಲೇಶ್ ಅವರು ಸಲ್ಲಿಸಿದ ಅಪ್ರತಿಮ ಸೇವೆ ಹಾಗೂ ಪ್ರಾಣಿ ಸಂಕುಲದ ರಕ್ಷಣೆಗಾಗಿ ಅವರು ಮಾಡುತ್ತಿರುವ ‘ಗೋ ಸೇವೆ’ಯನ್ನು ಗುರುತಿಸಿ ಈ ಸತ್ಕಾರ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿಲೇಶ್ ಅವರು, “ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಹಿರಿಯರ ಆಶೀರ್ವಾದ ಸದಾ ಹೀಗೆಯೇ ಇರಲಿ,” ಎಂದು ವಿನಂತಿಸಿಕೊಂಡರು. ದೇವಸ್ಥಾನದ ಮಂಡಳಿಯ ಪದಾಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ನಿಲೇಶ್ ಅವರ ಮುಂದಿನ ಸಮಾಜಮುಖಿ ಕಾರ್ಯಗಳಿಗೆ ಶುಭ ಹಾರೈಸಿದರು.

