hubli

ಮಹಿಳೆ ಮೇಲೆ ಅತ್ಯಾಚಾರ : ಆರೋಪಿಗಳ ತಲೆ ಬೋಳಿಸಿ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Share

ಇಬ್ಬರು ಯುವಕರು ಮಹಿಳೆಯೊಬ್ಬಳನ್ನು ಬಲವಂತವಾಗಿ ಅತ್ಯಾಚಾರ ಮಾಡಿ ವಿಡಿಯೋ ಹರಿಬಿಟ್ಟಿದ್ದರಿಂದ, ಸ್ಥಳೀಯರು ಆರೋಪಿಗಳ ತಲೆ ಬೋಳಿಸಿ ಸಾರ್ವಜನಿಕವಾಗಿ ಥಳಿಸಿದ್ದಾರೆ. ಈ ಘಟನೆ ಹಳೇ ಹುಬ್ಬಳ್ಳಿ ಭಾಗದಲ್ಲಿ ನಡೆದಿದೆ.

ಹಾವೇರಿ ಮೂಲದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಒಳಗಾಗಿದ್ದು, ಹುಬ್ಬಳ್ಳಿಯ ಶಿವಶಂಕರ ಕಾಲೋನಿಯ ಶಿವಾನಂದ್‌, ಗಣೇಶ್ ಗಿಡ್ಡಣ್ಣವರ ಎಂಬ ಇಬ್ಬರು ಮಹಿಳೆಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ್ದಾರೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಅತ್ಯಾಚಾರ ಮಾಡಿದ ವಿಡಿಯೋಗಳನ್ನು ಈ ದುರುಳರು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ವಿಷಯ ತಿಳಿದ ಸ್ಥಳೀಯರು ಇಬ್ಬರು ಆರೋಪಿಗಳನ್ನು ತಲೆ ಬೋಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆಗೆ ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗಿದೆ.

Tags:

error: Content is protected !!