ಕೇಂದ್ರ ಕಾರಾಗೃಹದಲ್ಲಿ ಸಜಾಬಂಧಿಯಾಗಿದ್ದ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಕೈದಿಯನ್ನು ಗದಗ ಜಿಲ್ಲೆಯ ಲಕ್ಷ್ಮೀಶ್ವರ ನಿವಾಸಿ ಈಶ್ವರಪ್ಪ ಪೂಜಾರ (46) ಎಂದು ಗುರುತಿಸಲಾಗಿದೆ. ಪತ್ನಿಯ ಕೊಲೆ ಆರೋಪದ (ಡೌರಿ ಕೇಸ್) ಮೇಲೆ ಬಂಧಿತನಾಗಿದ್ದ ಈಶ್ವರಪ್ಪ, ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ. ಬುಧವಾರದಂದು, ಕಾರಾಗೃಹದ ಆವರಣದಲ್ಲಿರುವ ತಾನು ಕೆಲಸ ಮಾಡುತ್ತಿದ್ದ ಕಟ್ಟಡದಲ್ಲಿ ಈತ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಈ ಘಟನೆ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
