hubbali

ಹುಬ್ಬಳ್ಳಿಯಲ್ಲಿ 15 ಕೆಜಿ ಗಾಂಜಾ ವಶ : ಮುಂಬೈ ಮೂಲದ ಇಬ್ಬರು ಗಾಂಜಾ ಪೆಡ್ಲರ್‌ಗಳು ಬಂಧನ

Share

ಮುಂಬೈನಿಂದ ಹಾವೇರಿ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿ, ಬರೋಬ್ಬರಿ 15 ಕೆ. ಜಿ. ಗಾಂಜಾ ವಶಪಡಿಸಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹೌದು… ಮುಂಬೈ ಮೂಲದ ಪರೀಜ್ ಜಹೀರ್ ಖಾನ್ ಹಾಗೂ ಸಲ್ಮಾನ್ ರೈಜಾಖಾನ್ ಎಂಬುವರನ್ನು ಬಂಧಿಸಲಾಗಿದೆ. ನಿನ್ನೆ ದಿನದಂದು ಹಾವೇರಿ ಜಿಲ್ಲೆಯ ಹಾನಗಲ್‌ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಇಬ್ಬರು ಗಾಂಜಾ ಪೆಡ್ಡರ್‌ಗಳನ್ನು ಬಂಧಿಸಿದ್ದಾರೆ. ಈ ಕುರಿತು ಕಸಬಾಪೇಟೆ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ. ಒಟ್ಟು 15 ಕೆಜಿ 483 ಗ್ರಾಂ ಗಾಂಜಾ, ಮೂರು ಮೊಬೈಲ್ ಫೋನ್ ಹಾಗೂ ಒಂದು ಕಾರು ವಶಪಡಿಸಿಕೊಳ್ಳಲಾಗಿದೆ.

Tags:

error: Content is protected !!