BELAGAVI

ರಸ್ತೆ ಮಧ್ಯದ ಬ್ಯಾರಿಕೇಡ್‌ಗೆ ಸ್ಥಳೀಯರ ಆಕ್ರೋಶ – ಶಾಸಕ ಆಸೀಫ್ ಸೇಠ್ ಭೇಟಿ, ತೆರವಿಗೆ ಭರವಸೆ

Share

ಬೆಳಗಾವಿ ನಗರದ ಕೀರ್ತಿ ಹೋಟೆಲ್‌ನಿಂದ ಮಾರ್ಕೆಟ್ ಪೊಲೀಸ್ ಠಾಣೆಯವರೆಗೆ ರಸ್ತೆಯ ಮಧ್ಯಭಾಗದಲ್ಲಿ ಅಳವಡಿಸಲಾಗಿರುವ ಬ್ಯಾರಿಕೇಡ್‌ಗಳಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದು, ಈ ಕುರಿತು ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಭಾಗದ ಜನರ ಮನವಿಗೆ ಸ್ಪಂದಿಸಿದ ಶಾಸಕ ಆಸೀಫ್ ಸೇಠ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಸ್ತೆಯ ಮಧ್ಯಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಿರುವುದರಿಂದ ಚಾವಟ ಗಲ್ಲಿ ಮತ್ತು ಶೆಟ್ಟಿ ಗಲ್ಲಿಯ ನಿವಾಸಿಗಳಿಗೆ ರಸ್ತೆ ದಾಟುವುದು ಸವಾಲಾಗಿ ಪರಿಣಮಿಸಿದೆ. ವಿಶೇಷವಾಗಿ ಶಾಲಾ ಮಕ್ಕಳು ಮತ್ತು ಹಿರಿಯ ನಾಗರಿಕರು ಅಲ್ಪ ದೂರ ಸಾಗಲು ಕಿಲೋಮೀಟರ್‌ಗಟ್ಟಲೆ ಸುತ್ತು ಹಾಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಶಾಸಕರ ಮುಂದೆ ದೂರಿದರು.

ಸ್ಥಳ ಪರಿಶೀಲನೆ ನಡೆಸಿದ ಶಾಸಕ ಆಸೀಫ್ ಸೇಠ್ ಅವರು, ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಚಾವಟ ಗಲ್ಲಿ ಮತ್ತು ಶೆಟ್ಟಿ ಗಲ್ಲಿಯ ಮೂಲೆಗಳಲ್ಲಿನ ಬ್ಯಾರಿಕೇಡ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಸಂಚಾರ ದಟ್ಟಣೆ ನಿಯಂತ್ರಣದ ಜೊತೆಗೆ ಸಾರ್ವಜನಿಕರ ಹಿತದೃಷ್ಟಿಯೂ ಮುಖ್ಯ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

Tags:

error: Content is protected !!