ಅಥಣಿ ಪಟ್ಟಣದ ಸಾಯಿ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಉಪನ್ಯಾಸಕನೊಬ್ಬ, ಅದೇ ಕಾಲೇಜಿನ ವಿದ್ಯಾರ್ಥಿನಿಯನ್ನು ಅಪಹರಿಸಿಕೊಂಡು ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಾಗವಾಡ ತಾಲೂಕಿನ ಉಗಾರ ಗ್ರಾಮದ ಪವನಕುಮಾರ ಶೀಲಗಾರ (28) ಎಂಬ ಅವಿವಾಹಿತ ಉಪನ್ಯಾಸಕನೇ ಈ ಕೃತ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯನ್ನು ಕಳೆದ ಜನವರಿ 8 ರಂದು ಅಪಹರಿಸಿಕೊಂಡು ಹೋಗಿದ್ದಾನೆ ಎಂದು ವಿದ್ಯಾರ್ಥಿನಿಯ ಪೋಷಕರು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಘಟನೆ ನಡೆದು 10 ದಿನಗಳು ಕಳೆದರೂ ಇಬ್ಬರ ಪತ್ತೆಯಾಗಿಲ್ಲ. ಉಪನ್ಯಾಸಕ ಮತ್ತು ವಿದ್ಯಾರ್ಥಿನಿ ಇಬ್ಬರ ಮೊಬೈಲ್‌ಗಳು ಸ್ವಿಚ್ ಆಫ್ ಆಗಿದ್ದು, ಪೊಲೀಸರ ಶೋಧನಾ ಕಾರ್ಯ ಮುಂದುವರಿದಿದೆ. ಮಗಳು ನಾಪತ್ತೆಯಾಗಿರುವುದರಿಂದ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.
ಪ್ರಕರಣದ ಗಾಂಭೀರ್ಯತೆ ಅರಿತ ಅಥಣಿ ಸಿಪಿಐ ಸಂತೋಷ ಹಳ್ಳೂರು ಹಾಗೂ ಪಿಎಸ್‌ಐ ಗಿರೀಮಲ್ಲಪ್ಪ ಉಪ್ಪಾರ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಆರೋಪಿ ಪವನಕುಮಾರ ಹಾಗೂ ವಿದ್ಯಾರ್ಥಿನಿಯ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ.
