goa

ಗೋವಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ: ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಭಾಗಿ

Share

ಗೋವಾ ರಾಜ್ಯದ ನೂತನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅರ್ಜೀತ ನಾಯಿಕ ಹಾಗೂ ಇತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗೂ ಗೋವಾ ಉಸ್ತುವಾರಿ ಡಾ. ಅಂಜಲಿ ನಿಂಬಾಳ್ಕರ್ ಭಾಗವಹಿಸಿ, ಯುವ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದರು.

ಗೋವಾ ರಾಜ್ಯದ ಯುವ ಕಾಂಗ್ರೆಸ್ ಘಟಕಕ್ಕೆ ನೂತನ ಅಧ್ಯಕ್ಷರಾಗಿ ಅರ್ಜೀತ ನಾಯಿಕ ಸೇರಿದಂತೆ ವಿವಿಧ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭವು ಅದ್ಧೂರಿಯಾಗಿ ಜರುಗಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಗೋವಾ ರಾಜ್ಯದ ಉಸ್ತುವಾರಿ ಜವಾಬ್ದಾರಿಯನ್ನು ಹೊತ್ತಿರುವ ಅವರು, ಯುವ ಕಾಂಗ್ರೆಸ್ ಪದಾಧಿಕಾರಿಗಳು ಪಕ್ಷದ ಬಲವರ್ಧನೆಗೆ ಹೇಗೆ ಶ್ರಮಿಸಬೇಕು ಎಂಬ ಬಗ್ಗೆ ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಬೃಹತ್ ಸಂಖ್ಯೆಯಲ್ಲಿ ನೆರೆದಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಂಜಲಿ ನಿಂಬಾಳ್ಕರ್, ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವಂತೆ ಸಲಹೆ ನೀಡಿದರು. ಅವರ ಮಾರ್ಗದರ್ಶನ ಹಾಗೂ ಸೂಚನೆಗಳನ್ನು ಶಿರಸಾವಹಿಸಿ ಪಾಲಿಸುವುದಾಗಿ ತಿಳಿಸಿದ ಯುವಪಡೆ, ಗೋವಾ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಬಲಿಷ್ಠವಾಗಿ ಕಟ್ಟುವ ನಿಟ್ಟಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮವು ಯುವ ಕಾರ್ಯಕರ್ತರ ಹರ್ಷೋದ್ಗಾರ ಹಾಗೂ ಪಕ್ಷದ ಸಂಘಟನೆಯ ಸಂಕಲ್ಪದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.

Tags:

error: Content is protected !!