hubbali

ಶಾರ್ಟ್ ಸರ್ಕ್ಯೂಟ್ ಹುಬ್ಬಳ್ಳಿಯಲ್ಲಿ ಹೊತ್ತಿ ಉರಿದ ಕಾಂಪ್ಲೆಕ್ಸ

Share

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿಕೊಂಡ ಬೆಂಕಿಯಿಂದ ಇಡೀ ಕಾಂಪ್ಲೆಕ್ಸ್ ಬೆಂಕಿಯಿಂದ ಧಗಧಗ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿ ತಡರಾತ್ರಿ ನಡೆದಿದೆ.

ಮೆಟ್ರೋ ಕಾಂಪ್ಲೆಕ್ಸ ನಲ್ಲಿ ಮೊದಲು 4 ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಏಕಾಏಕಿಯಾಗಿ ಇಡೀ ಕಾಂಪ್ಲೆಕ್ಸ್ ಬೆಂಕಿಯಿಂದ ಹೊತ್ತಿ ಉರಿದಿದೆ. ಸ್ಥಳೀಯರು ಇದನ್ನು ನೋಡಿ ಗಾಬರಿಗೊಂಡು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.

ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ದಳ ನೀರಿನಿಂದ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಈ ಬೆಂಕಿ ಅವಘಡದಿಂದ ಒಳಗೆ ಇದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆ ಹುಬ್ಬಳ್ಳಿ ಶಹರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Tags:

error: Content is protected !!