ಬೆಳಗಾವಿಯ ಹಿರಿಯ ಸಹಕಾರಿ ಧುರೀಣೆ ಹಾಗೂ ಕಾಂಗ್ರೆಸ್ ನಾಯಕಿ ಶೋಭಾ ಅನೀಲ್ ಹೇರವಾಡಕರ್ (80) ಅವರು ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು ಬೆಳಿಗ್ಗೆ ನಿಧನರಾದರು.
ಬೆಳಗಾವಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ 25 ವರ್ಷಗಳಿಗೂ ಹೆಚ್ಚು ಕಾಲ ನಿರ್ದೇಶಕಿಯಾಗಿ ಹಾಗೂ 1997ರಲ್ಲಿ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದ ಅವರು, ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದರು. 1989ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಇವರು, ಜೈಲು ಸಮಿತಿ ಮತ್ತು 20 ಅಂಶಗಳ ಕಾರ್ಯಕ್ರಮದ ನಾಮನಿರ್ದೇಶಿತ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಮೃತರ ಅಂತ್ಯಕ್ರಿಯೆಯು ಬೆಳಗಾವಿಯ ಸದಾಶಿವ ನಗರದಲ್ಲಿ ನೆರವೇರಿತು. ಇವರು ಇಬ್ಬರು ಪುತ್ರಿಯರು, ಅಳಿಯಂದಿರು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

