arrest

ಬೀಗ ಹಾಕಿದ ಮನೆಯಲ್ಲಿ ಕೈಚಳಕ ತೋರಿದ್ದ ಖದೀಮರು ಅರೆಸ್ಟ್; 20 ಲಕ್ಷದ ಚಿನ್ನಾಭರಣ ವಶ

Share

ಬೀಗ ಹಾಕಿದ ಮನೆಯನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಖದೀಮರ ಜಾಲವನ್ನು ಅಥಣಿ ಪೊಲೀಸರು ಭೇದಿಸಿದ್ದಾರೆ. ನಕಲಿ ಕೀ ಬಳಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಥಣಿ ಪಟ್ಟಣದ ಅವಟಿ ಮಠ ಪ್ಲಾಟ್‌ನಲ್ಲಿರುವ ಮಹೇಶ ಕುಲಕರ್ಣಿ ಎಂಬುವವರ ಮನೆಯಲ್ಲಿ ಕಳೆದ ಆಗಸ್ಟ್ ತಿಂಗಳಿನಲ್ಲಿ ಭೀಕರ ಕಳ್ಳತನ ನಡೆದಿತ್ತು. ಮನೆಯವರು ಇಲ್ಲದ ಸಮಯ ನೋಡಿ ನಕಲಿ ಕೀ ಬಳಸಿ ಒಳನುಗ್ಗಿದ್ದ ಕಳ್ಳರು, ಸುಮಾರು 170 ಗ್ರಾಂ ಚಿನ್ನ ಹಾಗೂ 5 ಲಕ್ಷ ನಗದು ಹಣವನ್ನು ದೋಚಿ ಪರಾರಿಯಾಗಿದ್ದರು. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.

ತನಿಖೆ ಚುರುಕುಗೊಳಿಸಿದ ಪೊಲೀಸರು ಜನೆವರಿ 24ರಂದು ಕಾರ್ಯಾಚರಣೆ ನಡೆಸಿ ಅಥಣಿಯ ಶ್ರೇಯಸ ಮಠಪತಿ, ಶಿವಕುಮಾರ ಅರಗೊಡ್ಡಿ ಹಾಗೂ ಶೇಡಬಾಳದ ಅಭಿಷೇಕ ಚೌಗಲೆ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 20,40,000/- ರೂ. ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ತಾಂತ್ರಿಕ ವಿಭಾಗದ ನೆರವಿನೊಂದಿಗೆ ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡವನ್ನು ಬೆಳಗಾವಿ ಎಸ್ಪಿ ಶ್ಲಾಘಿಸಿದ್ದಾರೆ.

Tags:

error: Content is protected !!