ರಾಜಕೀಯ ಚತುರತೆ ಮತ್ತು ಸಂಘಟನಾ ಶಕ್ತಿಯ ಮೂಲಕ ಎಐಸಿಸಿ ಮಟ್ಟದಲ್ಲಿ ಗುರುತಿಸಿಕೊಂಡಿರುವ ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಈಗ ಮತ್ತೊಂದು ಪ್ರಮುಖ ಜವಾಬ್ದಾರಿ ಲಭಿಸಿದೆ. ಈ ಹಿಂದೆ ಉತ್ತರಾಖಂಡ ಮತ್ತು ತೆಲಂಗಾಣ ರಾಜ್ಯಗಳ ಉಸ್ತುವಾರಿಯಾಗಿ ಪಕ್ಷವನ್ನು ಬಲಪಡಿಸಿದ್ದ ಇವರನ್ನು ಈಗ ಎಐಸಿಸಿ ಕಾರ್ಯದರ್ಶಿಗಳಾಗಿ ಉತ್ತರ ಪ್ರದೇಶದ ವಿಕ್ಷಕರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಸಂಘಟನಾ ಶ್ರೀ ಜನ್ ಅಭಿಯಾನದ ಅಡಿಯಲ್ಲಿ ಈ ನೇಮಕಾತಿ ನಡೆದಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಂಜಲಿ ಅವರ ಕಾರ್ಯಕ್ಷಮತೆಯನ್ನು ಮೆಚ್ಚಿ ಈ ಮಹತ್ವದ ಹೊಣೆಗಾರಿಕೆಯನ್ನು ನೀಡಿದ್ದಾರೆ. ಉತ್ತರ ಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಪಕ್ಷದ ಸಂಘಟನೆಯನ್ನು ಬಲಿಷ್ಠಗೊಳಿಸುವ ಸವಾಲು ಈಗ ಇವರ ಹೆಗಲಿಗೇರಿದೆ.
