Bagalkot

ಇಳಕಲ್ ಸಮೀಪದ ಗೊರಬಾಳ ಗ್ರಾಮದ ಬಾವಿಯಲ್ಲಿ ಯುವಕನ ಶವ ಪತ್ತೆ: ಕೊಲೆಯೋ ಅಥವಾ ಆತ್ಮಹತ್ಯೆಯೋ?

Share

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮದ ಹೊರವಲಯದ ಬಾವಿಯೊಂದರಲ್ಲಿ ಯುವಕನ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತ ಯುವಕ ಮುದ್ದೇಬಿಹಾಳ ಮೂಲದವನೆಂದು ಗುರುತಿಸಲಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.

ಮೃತನನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಮರಗೋಳ ಗ್ರಾಮದ ನಿವಾಸಿ ಅಜಯ್ ಸಿದ್ದಪ್ಪ ವಾಲಿಕಾರ (28) ಎಂದು ಗುರುತಿಸಲಾಗಿದೆ. ಈತ ಗೊರಬಾಳ ಗ್ರಾಮದ ಹೊರವಲಯದಲ್ಲಿರುವ ಬಾವಿಯ ಎದುರಿನ ಸಿಮೆಂಟ್ ಇಟ್ಟಂಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಬಾವಿಯಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಇಳಕಲ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಕ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾನೆಯೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದು ಪೊಲೀಸ್ ತನಿಖೆಯಿಂದಷ್ಟೇ ಹೊರಬರಬೇಕಿದೆ.

Tags:

error: Content is protected !!