Dharwad

ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ. 5 ರಂದು ನವದೆಹಲಿಯ ಚಲೋ- ಬಸವರಾಜ ಗುರಿಕಾರ.

Share

ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್ ನಲ್ಲಿ ಫೆಬ್ರುವರಿ 5ರಂದು ದೆಹಲಿ ಚಲೋ ಹೋರಾಟವನ್ನು, ಅಖಿಲ ಭಾರತ ಶಿಕ್ಷಕರ ಜಂಟಿ ಕ್ರೀಯಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಶಿಕ್ಷಕರ ಫೆಡರೇಷನ್ ಅಧ್ಯಕ್ಷ ಬಸವರಾಜ ಗುರಿಕಾರ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸೇವೆಯಲ್ಲಿ ಇರುವ ಶಿಕ್ಷಕರಿಗೆ ನಿಗದಿಗೊಳಿಸಿದ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (TET) ವಾಪಸ ಪಡೆಯುವದು NPS ರದ್ದುಗೊಳಿಸಿ OPS ಜಾರಿಗೊಳಿಸುವುದು. ನೂತನ ಶಿಕ್ಷಣ ನೀತಿಯಲ್ಲಿನ ವಿದ್ಯಾರ್ಥಿ ಮತ್ತು ಶಿಕ್ಷಕರ ವಿರೋಧಿ ಅಂಶಗಳನ್ನು ಕೈಬಿಡುವುದು, ಅತಿಥಿ ಶಿಕ್ಷಕರುಗಳನ್ನು ಖಾಯಂಗೊಳಿಸುವುದು. ದೇಶಾದ್ಯಾಂತ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡುವುದು, 8ನೇಯ ವೇತನ ಆಯೋಗದ ವರದಿಯನ್ನು ನಿಗದಿತ ಕಾಲಾವಧಿಯಲ್ಲಿ ಅನುಷ್ಠಾನಗೊಳಿಸುವುದು, ವಿಧಾನ ಪರಿಷತ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮತದಾನದ ಹಕ್ಕು ನೀಡುವದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು. ಜತೆಗೆ ಫೆಬ್ರುವರಿ 5ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುವ ಹೋರಾಟದಲ್ಲಿ ವಿವಿಧ ರಾಜ್ಯಗಳಿಂದ ಶಿಕ್ಷಕರು ಆಗಮಿಸಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಕರ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹಕ್ಕೊತ್ತಾಯ ಮಾಡಲಾಗುವುದು ಎಂದು ತಿಳಿಸಿದರು.

Tags:

error: Content is protected !!