hubbali

ಉಣಕಲ್‌ನಲ್ಲಿ ಕುಡುಗೋಲನಿಂದ ಹಲ್ಲೆ ಪ್ರಕರಣ: ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸ್‌ ಕಮಿಷನರ್ ಶಶಿಕುಮಾ‌ರ್

Share

ನಗರದ ಉಣಕಲ್ ಸಮೀಪದ ಬಾರಕೇರ ಓಣಿಯಲ್ಲಿ ಸಂಬಂಧಿಕರ ನಡುವೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ತಿಳಿದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್‌. ಶಶಿಕುಮಾರ್ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ ಸುಮಾರು 8 ಗಂಟೆಗೆ ಉಣಕಲ್ ಕೆರೆ ಬಳಿಯಲ್ಲಿ ಈ ಘಟನೆ ನಡೆದಿದ್ದು, ಸಂಬಂಧಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ ಹಲ್ಲೆಗೆ ತಿರುಗಿದೆ ಎಂದು ಹೇಳಿದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.

Tags:

error: Content is protected !!