ವ್ಯಕ್ತಿಯೊಬ್ಬನ ಕುತ್ತಿಗೆಯನ್ನು ಕೊಯ್ದು ಬರ್ಬರ ಹತ್ಯೆ ಮಾಡಲಾಗಿದೆ. ಭೀಮಾತೀರದಲ್ಲಿ ರೌಡಿಶೀಟರ್ನ ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬರಗಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಿದ್ದರಾಮ ದೊಂಡಿಬಾ ಕ್ಷತ್ರಿ(29) ಬರ್ಬರ ಹತ್ಯೆಯಾದ ರೌಡಿಶೀಟರ್ ಆಗಿದ್ದು, ದುಷ್ಕರ್ಮಿಗಳು ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ. ಹಣ ಹಾಗೂ ಹೆಣ್ಣಿನ ವ್ಯವಹಾರ ಹಿನ್ನೆಲೆ ಹತ್ಯೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

