BELAGAVI

ಕ್ಯಾಂಪ್ ಪ್ರದೇಶದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಶಾಸಕ ಆಸೀಫ್ ಸೇಠ್

Share

ಬೆಳಗಾವಿ ಕ್ಯಾಂಪ್ ಪ್ರದೇಶದ ಜನರ ದಶಕಗಳ ಕನಸು ನನಸಾಗುವ ಕಾಲ ಹತ್ತಿರವಾಗಿದ್ದು, ಶಾಸಕ ಆಸೀಫ್ ಸೇಠ್ ರಸ್ತೆ ಕಾಮಗಾರಿಗೆ ಅಧಿಕೃತ ಚಾಲನೆ ನೀಡಿದ್ದಾರೆ. ಮೂಲಸೌಕರ್ಯ ವೃದ್ಧಿಗೆ ಆದ್ಯತೆ ನೀಡಿರುವ ಶಾಸಕರು, ಗುಣಮಟ್ಟದ ಕೆಲಸಕ್ಕೆ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡುವ ಮೂಲಕ ನಿವಾಸಿಗಳಲ್ಲಿ ಭರವಸೆ ಮೂಡಿಸಿದ್ದಾರೆ.

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಕ್ಯಾಂಪ್ ಪ್ರದೇಶದಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಈ ಭಾಗದ ಸಂಪರ್ಕ ವ್ಯವಸ್ಥೆ ಮತ್ತು ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಯೋಜನೆಯು ಅತ್ಯಂತ ಮಹತ್ವದ ಹೆಜ್ಜೆಯಾಗಿದೆ.ಕಾಮಗಾರಿಯ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಯೋಜನೆಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಗುಣಮಟ್ಟದ ಕಾಮಗಾರಿಯಿಂದ ಮಾತ್ರ ಜನರಿಗೆ ದೀರ್ಘಕಾಲದ ಅನುಕೂಲ ಲಭಿಸಲು ಸಾಧ್ಯ ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ನಿವಾಸಿಗಳು ಮತ್ತು ಕಂಟೋನ್ಮೆಂಟ್ ಬೋರ್ಡ್ ಅಧಿಕಾರಿಗಳು ಉಪಸ್ಥಿತರಿದ್ದರು. ರಸ್ತೆ ಕಾಮಗಾರಿ ಆರಂಭವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಕ್ಯಾಂಪ್ ನಿವಾಸಿಗಳು, ಈ ಹೊಸ ರಸ್ತೆಯಿಂದ ದಿನನಿತ್ಯದ ಸಂಚಾರ ಸುಗಮವಾಗಲಿದ್ದು, ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

Tags:

error: Content is protected !!