State

ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ; ಎಂ.ಎಲ್.ಸಿ ಪಿ.ಎಚ್. ಪೂಜಾರ್…

Share

ವಿಧಾನ ಪರಿಷತ್ತಿನ ಕಲಾಪದಲ್ಲಿ ಇಂದು ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಚರ್ಚೆ ನಡೆಯಿತು. ಬಿಜೆಪಿ ಸದಸ್ಯ ಪಿ.ಎಚ್. ಪೂಜಾರ್ ಅವರು ಸರ್ಕಾರವು ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಾಂತ್ರಿಕ ಕಾರಣಗಳಿಂದಾಗಿ ಹಣ ವಿಳಂಬವಾಗುತ್ತಿದೆ ಎಂದು ಸಮರ್ಥಿಸಿಕೊಂಡರು.

ವಿಧಾನ ಪರಿಷತ್ತಿನಲ್ಲಿಂದು ಬಿಜೆಪಿ ಸದಸ್ಯ ಪಿ.ಎಚ್. ಪೂಜಾರ್ ಮಾತನಾಡಿ, “ಆರ್ಟಿಕಲ್ 371ಜೆ ಜಾರಿಯಲ್ಲಿದ್ದರೂ ಉತ್ತರ ಕರ್ನಾಟಕಕ್ಕೆ ವಿಶೇಷ ಅನುದಾನ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳು ಅಭಿವೃದ್ಧಿಯಿಂದ ವಂಚಿತವಾಗಿವೆ. ಉದ್ಯಮಗಳು ಕೇವಲ ಬೆಂಗಳೂರಿಗೆ ಸೀಮಿತವಾಗುತ್ತಿವೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಬಾಗಲಕೋಟೆಯ ಸುಮಾರು 700 ಮಹಿಳೆಯರು ಇನ್ನೂ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯದಿಂದ ವಂಚಿತರಾಗಿದ್ದಾರೆ ಎಂದು ಸರ್ಕಾರದ ಗಮನ ಸೆಳೆದರು.

ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ 1 ಕೋಟಿ 26 ಲಕ್ಷ ಜನರಿಗೆ ಗೃಹಲಕ್ಷ್ಮಿ ಯೋಜನೆ ತಲುಪಿದೆ. ಸುಮಾರು 52 ಸಾವಿರ ಮಹಿಳೆಯರ ಖಾತೆಗೆ ಹಣ ಜಮೆಯಾಗಲು ಆದಾಯ ತೆರಿಗೆ ಮತ್ತು ಜಿ.ಎಸ್.ಟಿ ಪಾವತಿದಾರರು ಎಂಬ ತಾಂತ್ರಿಕ ಸಮಸ್ಯೆ ಅಡ್ಡಿಯಾಗಿದೆ. ಈಗಾಗಲೇ 20 ಸಾವಿರ ಮಹಿಳೆಯರ ಸಮಸ್ಯೆ ಪರಿಹರಿಸಲಾಗಿದ್ದು, ಉಳಿದವರ ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Tags:

error: Content is protected !!