ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಫಾಯಿ ಕರ್ಮಚಾರಿ ಘಟಕದ ರಾಜ್ಯ ಅಧ್ಯಕ್ಷರ ಅನುಮೋದನೆಯ ಮೇರೆಗೆ, ಬೆಳಗಾವಿ ಜಿಲ್ಲಾ (ಗ್ರಾಮೀಣ) ಸಫಾಯಿ ಕರ್ಮಚಾರಿ ಕಾಂಗ್ರೆಸ್ ಸಮಿತಿಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಗಜಾನನ ಅವಾಣ ಕಾಂಬಳೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಬೆಳಗಾವಿ ಜಿಲ್ಲಾಧ್ಯಕ್ಷರಾದ ರಾಜು ಗಂಗಪ್ಪಾ ಪಾಟಿ ಅವರು ಈ ನೇಮಕಾತಿ ಆದೇಶವನ್ನು ಹೊರಡಿಸಿದ್ದು, ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗಾಗಿ ಶ್ರಮಿಸುವಂತೆ ಸೂಚಿಸಿದ್ದಾರೆ. ನೂತನ ಜವಾಬ್ದಾರಿ ವಹಿಸಿಕೊಂಡಿರುವ ಗಜಾನನ ಕಾಂಬಳೆ ಅವರು, ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ಧಿಯ ಜೊತೆಗೆ ಜಿಲ್ಲಾದ್ಯಂತ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಮತ್ತು ಸಂಘಟನೆಯ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಈ ಮೂಲಕ ಕೋರಲಾಗಿದೆ. ಈ ನೇಮಕಾತಿಯು ಜಿಲ್ಲೆಯ ಸಫಾಯಿ ಕರ್ಮಚಾರಿಗಳ ಸಮಸ್ಯೆಗಳಿಗೆ ಧ್ವನಿಯಾಗಲು ಮತ್ತು ಪಕ್ಷದ ತತ್ವ ಸಿದ್ಧಾಂತಗಳನ್ನು ತಳಮಟ್ಟಕ್ಕೆ ತಲುಪಿಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾ ಘಟಕ ವಿಶ್ವಾಸ ವ್ಯಕ್ತಪಡಿಸಿದೆ.
