Dharwad

ಧಾರವಾಡದ ಶಿವಳ್ಳಿಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಬೈಕ ಸಾವರ ಸಾವು…

Share

ಅಜ್ಜಿಯ ಅಂತ್ಯಕ್ರಿಯೆ ಮುಗಿಸಿಕೊಂಡು ಮನೆಗೆ ಮರಳುವ ವೇಳೆ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿದ ಘಟನೆ ಧಾರವಾಡ ತಾಲೂಕಿನ ಶಿವಳ್ಳಿ ಧಾರವಾಡ ರಸ್ತೆಯಲ್ಲಿಂದು ನಡೆದಿದೆ.

ಧಾರವಾಡ ತಾಲೂಕಿನ ಗೋವನಕೊಪ್ಪದ ವಿನಾಯಕ ಸುಳ್ಳದ (23) ಎಂಬಾತನೇ ಮೃತ ಯುವಕನೆಂದು ಗುರುತಿಸಲಾಗಿದೆ. ಮೃತ ಯುವಕ ತನ್ನ ಅಜ್ಜಿಯ ಅಂತ್ಯ ಸಂಸ್ಕಾರಕ್ಕೆಂದು ಹೋಗಿ ಮರಳಿ ತನ್ನೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಜ್ಜಿಯ ಅಂತ್ಯ ಸಂಸ್ಕಾರಕ್ಕೆಂದು ಹೋಗಿದ್ದವ ಇದೀಗ ತಾನೇ ಬಾರದ ಲೋಕಕ್ಕೆ ತೆರಳಿದ್ದು, ವಿಪರ್ಯಾಸವೆ ಸರಿ. ಇನ್ನೂ ಅತೀ ವೇಗವಾಗಿ ಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:

error: Content is protected !!