Accident

ಸವದತ್ತಿ ಬಳಿ ಭೀಕರ ಅಪಘಾತ: ಟ್ರ್ಯಾಕ್ಟರ್ ಡಿಕ್ಕಿಯಾಗಿ ಮಹಾರಾಷ್ಟ್ರ ಮೂಲದ ಪಾದಾಚಾರಿ ಸ್ಥಳದಲ್ಲೇ ಸಾವು

Share

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಓರ್ವನ ಪ್ರಾಣವನ್ನು ಬಲಿಪಡೆದಿದೆ. ವೇಗವಾಗಿ ಬಂದ ಟ್ರ್ಯಾಕ್ಟರ್ ಪಾದಾಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿಯೊಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಬಡ್ಲಿ ಗ್ರಾಮದ ಹತ್ತಿರ ನಿನ್ನೆ ತಡರಾತ್ರಿ ಈ ರಕ್ತಸಿಕ್ತ ಘಟನೆ ನಡೆದಿದೆ. ರೇಣುಕಾ ಸಕ್ಕರೆ ಕಾರ್ಖಾನೆಯಿಂದ ಬೈಲಹೊಂಗಲ ಕಡೆಗೆ ಸಂಚರಿಸುತ್ತಿದ್ದ ಟ್ರ್ಯಾಕ್ಟರ್, ಪಾದಾಚಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ನಿವಾಸಿಯಾದ ಅಶೋಕ ಗಾಯಕವಾಡ ಎಂಬುವವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದುರ್ದೈವಿಯು ಕೆಲಸದ ನಿಮಿತ್ತ ಈ ಭಾಗಕ್ಕೆ ಆಗಮಿಸಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸವದತ್ತಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಸದ್ಯ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

Tags:

error: Content is protected !!