ಫೆಬ್ರುವರಿ 27 ರಂದು 7 ಜಿಲ್ಲೆಗಳ ಜೆಡಿಎಸ್ ಜನತಾ ಸಮಾವೇಶವನ್ನು ವಿಜಯಪುರದಲ್ಲಿ ಆಯೋಜಿಸಲಾಗಿದೆ ಎಂದು ಜ್ಯಾತ್ಯಾತೀತ ಜನತಾದಳದ ಬೆಳಗಾವಿ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಹೇಳಿದರು.

ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದ ಅವರು, ಪಕ್ಷದ ವರಿಷ್ಠರಾದ ಮಾಜಿ ಪಿಎಂ ದೇವೆಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ನಿಖೀಲ್ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಫೆಬ್ರುವರಿ 27 ರಂದು 7 ಜಿಲ್ಲೆಗಳ ಜನತಾ ಸಮಾವೇಶವನ್ನು ವಿಜಯಪುರದಲ್ಲಿ ಆಯೋಜಿಸಲಾಗಿದೆ. ಸುಮಾರು 1 ವರೆ ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಬೆಳಗಾವಿಯಿಂದ 20 ಸಾವಿರ ಜನರನ್ನು ಕರೆದುಕೊಂಡು ಹೋಗಲಾಗುವುದು. ಈ ನಿಟ್ಟಿನಲ್ಲಿ 18 ಮತಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಸಭೆ ನಡೆಸಲಾಗುವುದ ಎಂದರು.
ಇನ್ನು ಕಾಂಗ್ರೆಸ್ ಆಡಳಿತಕ್ಕೆ ರಾಜ್ಯದ ಜನರು ಬೇಸತ್ತಿದ್ದಾರೆ. ರಾಜ್ಯಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ ಕೇಂದ್ರದ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ಬೆಂಬಲಿಸಬೇಕು.
ಈ ಮಾಧ್ಯಮಗೋಷ್ಟಿಯಲ್ಲಿ ಸುಭಾಷ್ ಬಾಗೇವಾಡಿ, ಪ್ರಕಾಶ್ ಸೋನವಾಲ್ಕರ್, ರಾಜು ರೊಟ್ಟಿ, ಅಶೋಕ್ ಪಾಟೀಲ್, ಪ್ರದೀಪ್ ಮಾಳಗಿ, ರುದ್ರಗೌಡ ಪಾಟೀಲ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.
