ಅದೊಂದು ಮಹತ್ತರ ನೀರಾವರಿ ಯೋಜನೆ. ಆ ಯೋಜನೆಯಲ್ಲಿ ಒಂದು ದೊಡ್ಡ ಕಾಲುವೆ ನಿರ್ಮಿಸಲಾಗಿದೆ. ಆ ಕಾಲುವೆ ರೈತರಿಗೆ ವರದಾನವಾಗಬೇಕಿತ್ತು. ಆದ್ರೆ ಆ ಕಾಲುವೆ ಒಡೆದು ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿದೆ. ಇದೀಗ ರೈತರು ಹಾನಿಯಾದ ಬೆಳೆಗೆ ಪರಿಹಾರ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಇನ್ನೂ ಮಾಜಿ ಸಚಿವರ ನೇತೃತ್ವದಲ್ಲಿ ಬಿಜೆಪಿ ನಿಯೋಗ ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಪರಿಹಾರ ನೀಡಲು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್..


ವಿಜಯಪುರ ಜಿಲ್ಲೆಯ ಕೊಲ್ಲಾರ ತಾಲೂಕಿನ ಹಳ್ಳದ ಗೆಣ್ಣೂರ ಗ್ರಾಮದ ಬಳಿ ಮುಳವಾಡ ಏತ ನೀರಾವರಿ ಯೋಜನೆಯ ಮೊದಲ ಹಂತದ ಕಾಲುವೆ ಒಡೆದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಕಾಲುವೆ ನೀರು ಹರಿದು ಹತ್ತಾರು ಎಕರೆ ಜಮೀನಿನಲ್ಲಿದ್ದ ಗೋಧಿ, ಈರುಳ್ಳಿ, ಕಬ್ಬಿನ ಬೆಳೆಗಳು ಸಂಪೂರ್ಣ ನಾಶವಾಗಿವೆ. ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಫಸಲು ನೀರು ಪಾಲಾಗಿದೆ. ಕೆಬಿಜೆಎನ್ಎಲ್ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ರೈತರು ಆರೋಪಿಸಿದ್ದಾರೆ. ಇನ್ನೂ ವಿಜಯಪುರ ಜಿಲ್ಲೆಯ ಕೋಲಾರ ತಾಲೂಕಿನ ಹಳ್ಳದ ಗೆನ್ನೂರ್ ಗ್ರಾಮದಲ್ಲಿ ಮುಳುಗೋಡ ಏತ ನೀರಾವರಿಯ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ರೈತರ ಜಮೀನಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಳೆ ಹಾನಿಯಾಗಿದೆ. ಮಂಗಳವಾರದಂದು ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಎಸ್ ಕೆ ಬೆಳ್ಳುಳ್ಳಿ, ಕಾಲುವೆ ಒಡೆದ ಪರಿಣಾಮ ರೈತರ ಬೆಳೆ ಸಂಪೂರ್ಣವಾಗಿ ಹಾಳಾಗಿರುವುದನ್ನು ಪರಿಶೀಲಿಸಿ, ಕೂಡಲೇ ರೈತರಿಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ.

ಇನ್ನೂ ಹಾನಿಗೊಳಗಾದ ಬೆಳೆಗಳಿಗೆ ತಕ್ಷಣ ಪರಿಹಾರ ವಿತರಿಸಬೇಕು. ಜೊತೆಗೆ ನಾನಾ ಕಡೆ ಬಿರುಕು ಬಿಟ್ಟಿರುವ ಕಾಲುವೆಗಳನ್ನು ಶೀಘ್ರ ದುರಸ್ತಿ ಮಾಡಬೇಕು, ಮೇಲಿನ ಗಿಡಗಂಟಿಗಳನ್ನು ತೆರವುಗೊಳಿಸಬೇಕು. ಬೆಳೆದ ಈರುಳ್ಳಿ ಸೇರಿದಂತೆ ಇತರೆ ಬೆಳೆಗಳು ಹಾನಿಗೀಡಾಗಿರುವ ರೈತರಿಗೆ ಸಮರ್ಪಕ ಪರಿಹಾರ ನೀಡಬೇಕು. ಇದಕ್ಕೆ ಹೊಣೆಗಾರರಾದ ಕೆಬಿಜೆಎನ್‌ಎಲ್ ಅಧಿಕಾರಿಗಳನ್ನು ಅಮಾನತು ಮಾಡಬೇಕು ಹಾಗೂ ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಮುಳವಾಡ 1ನೇ ಹಂತದ ಕಾಲುವೆ ಒಡೆದು ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತು ಮಾಡಬೇಕು ಮತ್ತು ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಅಲ್ಲದೆ ಕಾಲುವೆ ಒಡೆದು ನಾಶವಾಗಿರುವ ರೈತರ ಜಮೀನಿಗಳಿಗೆ ತಕ್ಷಣ ಪರಿಹಾರ ವಿತರಿಸಬೇಕು. ರೈತರಿಗೆ ಅನ್ಯಾಯವಾಗದಂತೆ ಸಂಬಂಧಿಸಿದ ಮೇಲಾಧಿಕಾರಿಗಳು ಕಾಲುವೆ ಸ್ಥಿತಿಗತಿಯ ಬಗ್ಗೆ ಸೂಕ್ತ ಗಮನಹರಿಸಬೇಕು ಎಂದು ಒತ್ತಾಯ ಜೋರಾಗಿದೆ.

ಒಟ್ನಲ್ಲಿ ರೈತರಿಗೆ ವರದಾನವಾಗಬೇಕಿದ್ದ ಕಾಲುವೆ ಒಡೆದು ರೈತರಿಗೆ ಮಾರಕವಾಗಿ ಪರಿಣಮಿಸಿದ್ದು ವಿಪರ್ಯಾಸವೆ ಸರಿ. ಇನ್ನಾದರೂ ಸರ್ಕಾರ ರೈತರಿಗೆ ಬೆಳೆ ಪರಿಹಾರ ನೀಡಲಿ ಎನ್ನುವದು ರೈತರ ಒತ್ತಾಯವಾಗಿದೆ. ಸರ್ಕಾರ ಇತ್ತ ಕಡೆ ಗಮನಹರಿಸಬೇಕಿದೆ.
