6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು,ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣವಾಗಿ ಸುಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸುಂಗಠಾಣ ಗ್ರಾಮದಲ್ಲಿ ನಡೆದಿದೆ. ಹಣಮಂತಪ್ಪ ಗುರಲಿಂಗಪ್ಪ ಬಿರಾದಾರ ಉರ್ಫ್ ಕುರನಳ್ಳಿ ಇವರ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿಗೆ ಬೆಂಕಿ ತಗುಲಿ ಅಂದಾಜು 7 ಲಕ್ಷ ಮೌಲ್ಯದ ಕಬ್ಬು ಸುಟ್ಟು ಹೋಗಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

