Bailahongala

ಸಹಕಾರಿ ಕ್ಷೇತ್ರದಲ್ಲಿ ದೊಡ್ಡಗೌಡರ ಅಷ್ಟದಿಗ್ವಿಜಯ: 8ನೇ ಬಾರಿಗೆ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಮಹಾಂತೇಶ್ ದೊಡ್ಡಗೌಡರಿಗೆ ಅಭಿನಂದನೆ

Share

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗದ್ದಿಕರವಿನಕೊಪ್ಪದಲ್ಲಿ ಮಾಜಿ ಶಾಸಕ ಮಹಾಂತೇಶ್ ದೊಡ್ಡಗೌಡರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಭವ್ಯ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದರು. ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸತತ ಎಂಟನೇ ಬಾರಿಗೆ ಆಯ್ಕೆಯಾದ ದೊಡ್ಡಗೌಡರನ್ನು ಸನ್ಮಾನಿಸಿ ಸಂಭ್ರಮಿಸಲಾಯಿತು.

ಬೈಲಹೊಂಗಲ ತಾಲೂಕಿನ ಗದ್ದಿಕರವಿನಕೊಪ್ಪ ಗ್ರಾಮದ ಬಿ.ಎಸ್. ಯಡಿಯೂರಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ಈ ಸಮಾರಂಭದಲ್ಲಿ ಕಿತ್ತೂರು ಕ್ಷೇತ್ರದ ಮಾಜಿ ಶಾಸಕರಾದ ಮಹಾಂತೇಶ್ ದೊಡ್ಡಗೌಡರು ಬೆಳಗಾವಿ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಎಂಟನೇ ಬಾರಿಗೆ ಆಯ್ಕೆಯಾದ ಹಿನ್ನೆಲೆ ಅವರ ಅಭಿಮಾನಿಗಳು, ಸಹಕಾರಿ ಸಂಘಗಳ ಮುಖಂಡರು ಹಾಗೂ ಕಾರ್ಯಕರ್ತರಿಂದ ಭವ್ಯ ಅಭಿನಂದನಾ ಸಮಾರಂಭ ಆಯೋಜಿಸಲಾಯಿತು. ರೈತ ಗೀತೆ ಗಾಯನ ಹಾಗೂ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಅಣ್ಣಾಸಾಹೇಬ ಜೊಲ್ಲೆ, KLE ಸಂಸ್ಥೆಯ ಉಪಾಧ್ಯಕ್ಷ ಬಸವರಾಜ ತಟವಾಟಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ವಿಶೇಷವೆಂದರೆ ಸಾರ್ವಜನಿಕರಿಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ಕುರಿತು ಇರುವ ಪ್ರಶ್ನೆಗಳನ್ನು ನೇರವಾಗಿ ಅಧ್ಯಕ್ಷರಿಗೆ ಕೇಳಲು ಅವಕಾಶ ಕಲ್ಪಿಸಲಾಗಿದ್ದು, ಪಿಕೆಪಿಎಸ್ ಸದಸ್ಯರು ಹಾಗೂ ಸಾರ್ವಜನಿಕರು ಕೇಳಿದ ಪ್ರಶ್ನೆಗಳಿಗೆ ಅಧ್ಯಕ್ಷರಾದ ಅಣ್ಣಾಸಾಹೇಬ ಜೊಲ್ಲೆ ಸ್ಪಷ್ಟನೆ ನೀಡಿದರು. ಬೈಟ್
ಮಹಾಂತೇಶ್ ದೊಡ್ಡಗೌಡರು ಮಾತನಾಡಿ, ಹಲವರು ರಾಜಕೀಯವಾಗಿ ನನ್ನನ್ನು ಮುಗಿಸಲು ಪ್ರಯತ್ನಿಸಿದರು, ಆದರೆ ಜನರು ನನ್ನ ಕೈ ಬಿಡಲಿಲ್ಲ ಎಂದರು. ಇದೇ ವೇಳೆ ಅಭಿಮಾನಿಗಳು ದೊಡ್ಡಗೌಡರಿಗೆ ಉಡುಗೊರೆಗಳು ಹಾಗೂ ಸನ್ಮಾನಗಳನ್ನು ಸಲ್ಲಿಸಿ ತಮ್ಮ ಗೌರವ ಸೂಚಿಸಿದರು.

Tags:

error: Content is protected !!