ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಆರ್ಸಿ ಪ್ಲಾಂಟ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರು ಯುವಕರ ನಡುವೆ ಹೊಡೆದಾಟ ನಡೆದಿದೆ. ವಾಗ್ವಾದ ತೀವ್ರಗೊಂಡು ದೊಣ್ಣೆ ಹಾಗೂ ಕಲ್ಲುಗಳಿಂದ ಪರಸ್ಪರ ಹಲ್ಲೆ ನಡೆಸಲಾಗಿದೆ.

ಘಟನೆಯಲ್ಲಿ ಶೇಕರ ಮಾದರ ಮತ್ತು ವಿಶ್ವನಾಥ್ ಉಪ್ಪಾಸೆ ಹೊಡೆದಾಡಿಕೊಂಡಿದ್ದು, ಶೇಕರ ಮಾದರ ಅವರಿಗೆ ತಲೆ ಹಾಗೂ ಕೈಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಅಥಣಿ ಸಮುದಾಯದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
