BELAGAVI

ರಾಮತೀರ್ಥ ನಗರದ ಚಿತ್ರಣ ಬದಲಿಸಲು ಸಜ್ಜಾದ ಶಾಸಕ ಆಸೀಫ್ ಸೇಠ್

Share

ಬೆಳಗಾವಿಯ ರಾಮತೀರ್ಥ ನಗರದ ನಿವಾಸಿಗಳ ದಶಕಗಳ ಬೇಡಿಕೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಬುಡಾ ವತಿಯಿಂದ ಬರೊಬ್ಬರಿ 4 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಶಾಸಕ ಆಸೀಫ್ ಸೇಠ್ ಅವರು ಈ ಭಾಗದ ಜನರ ಮೊಗದಲ್ಲಿ ಮಂದಹಾಸ ಮೂಡಿಸಿದ್ದಾರೆ
ಬೆಳಗಾವಿಯ ರಾಮತೀರ್ಥ ನಗರದಲ್ಲಿ ಬುಡಾ (BUDA) ವತಿಯಿಂದ 4 ಕೋಟಿ ರೂಪಾಯಿ ಅನುದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಚರಂಡಿ, ಪೇವರ್ಸ್ ಅಳವಡಿಕೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಆಸೀಫ್ ಸೇಠ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, “ರಾಮತೀರ್ಥ ನಗರವು ಈಗ ಮಹಾನಗರ ಪಾಲಿಕೆಗೆ ಹಸ್ತಾಂತರಗೊಂಡಿದ್ದರೂ ಸಹ, ಈ ಹಿಂದೆ ಬುಡಾ ವ್ಯಾಪ್ತಿಯಲ್ಲಿ ಬಾಕಿ ಉಳಿದಿದ್ದ ಕಾಮಗಾರಿಗಳನ್ನು ಬುಡಾ ಅನುದಾನದಲ್ಲೇ ಪೂರ್ಣಗೊಳಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಇನ್ನುಳಿದ ಪ್ರದೇಶಗಳ ಅಭಿವೃದ್ಧಿಗಾಗಿ ಮತ್ತೆ 4 ಕೋಟಿ ರೂಪಾಯಿ ಮೀಸಲಿಡಲಾಗುವುದು” ಎಂದು ಭರವಸೆ ನೀಡಿದರು.


ಬಡಾವಣೆಯ ಒಳ ಮತ್ತು ಹೊರ ರಸ್ತೆಗಳ ಸುಧಾರಣೆಗೆ ಶಾಸಕರು ತೋರುತ್ತಿರುವ ಆಸಕ್ತಿಯನ್ನು ಕಂಡು ಸ್ಥಳೀಯ ನಿವಾಸಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಶಾಸಕರ ಈ ಜನಪರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿರುವ ಸಾರ್ವಜನಿಕರು, ಗುಣಮಟ್ಟದ ಕಾಮಗಾರಿ ನಡೆಯುವ ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ನಗರಸೇವಕಿ ಪುಷ್ಪಾ ಪರ್ವತರಾವ್, ಪ್ರಮುಖರಾದ ಅಮಾನ್ ಸೇಠ್, ಸುರೇಶ್ ಯಾದವ್ ಸೇರಿದಂತೆ ಬಡಾವಣೆಯ ನೂರಾರು ನಿವಾಸಿಗಳು ಉಪಸ್ಥಿತರಿದ್ದು, ಅಭಿವೃದ್ಧಿ ಕಾರ್ಯಕ್ಕೆ ಸಾಕ್ಷಿಯಾದರು.

Tags:

error: Content is protected !!