Bagalkot

ಅಂಬೇಡ್ಕರ್’ರ ಆಶಯದಂತೆ ಸಮ ಸಮಾಜ ನಿರ್ಮಾಣವೇ ನಮ್ಮ ಗುರಿ: ಬೀಳಗಿಯಲ್ಲಿ ಬಿ.ವೈ. ವಿಜಯೇಂದ್ರ ಶಪಥ

Share

ನಾವು ಸಾಮಾಜಿಕ ನ್ಯಾಯದ ಸಂಕಲ್ಪ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರವು ಕೇವಲ ಓಲೈಕೆ ರಾಜಕಾರಣದಲ್ಲಿ ಮುಳುಗಿದ್ದು, ರಾಜ್ಯದ ರೈತರು ಮತ್ತು ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಅಂಬೇಡ್ಕರ್ ವೃತ್ತದಿಂದ ಬಿಜೆಪಿ ಕಚೇರಿಯವರೆಗೆ ಹಮ್ಮಿಕೊಳ್ಳಲಾಗಿದ್ದ ಭರ್ಜರಿ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ ಅವರನ್ನು ಕಾರ್ಯಕರ್ತರು ಘೋಷಣೆಗಳ ಮೂಲಕ ಸ್ವಾಗತಿಸಿದರು. ನಂತರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ‘ವಿಬಿ ಜಿ ರಾಮ್ ಜಿ’ ಜನಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ಮಾಜಿ ಸಚಿವ ಭೈರತಿ ಬಸವರಾಜ್ ಅವರ ಬಂಧನದ ಕುರಿತು ಪ್ರತಿಕ್ರಿಯಿಸಿ, “ನಾವು ಎಲ್ಲವನ್ನೂ ಗಮನಿಸುತ್ತಿದ್ದೇವೆ, ಅವರು ಕಾನೂನಾತ್ಮಕ ಹೋರಾಟ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

Tags:

error: Content is protected !!